300 ರೂ. ಆಮಿಷವೊಡ್ಡಿ ಸಿದ್ದರಾಮಯ್ಯ ಸಮಾವೇಶಕ್ಕೆ ಜನ ಕರೆಸಿದ ಆರೋಪ: ವಿಡಿಯೋ ವೈರಲ್

300 ರೂ. ಆಮಿಷವೊಡ್ಡಿ ಸಿದ್ದರಾಮಯ್ಯ ಸಮಾವೇಶಕ್ಕೆ ಜನ ಕರೆಸಿದ ಆರೋಪ: ವಿಡಿಯೋ ವೈರಲ್

ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: Ganapathi Sharma

Updated on: Nov 08, 2024 | 10:19 AM

ಸಂಡೂರು ಉಪಚುನಾವಣೆಯ ಪ್ರಚಾರದ ಕಾವು ಜೋರಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಮತಯಾಚನೆಗೆ ಸಿಎಂ ಸಿದ್ದರಾಮಯ್ಯ ಗುರುವಾರ ಬಂದಿದ್ದರು. ಸಿಎಂ ಸಮಾವೇಶಕ್ಕೆ ಹಣ ನೀಡಿ ಮಹಿಳೆಯರನ್ನು ಕರೆಸಿಕೊಂಡ ಆರೋಪ ಇದೀಗ ಕೇಳಿಬಂದಿದ್ದು, ವಿಡಿಯೋವೊಂದು ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಇಲ್ಲಿದೆ.

ಬಳ್ಳಾರಿ, ನವೆಂಬರ್ 8: ಸಂಡೂರು ಉಪಚುನಾವಣೆ ಅಖಾಡದಲ್ಲಿ ಮತಬೇಟೆಗೆ ಇಳಿದಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಗುರುವಾರ ಮತಯಾಚನೆ ಮಾಡಿದ್ದರು. ಸಿಎಂ ಭಾಗವಹಿಸಿದ್ದ ಸಮಾವೇಶಕ್ಕೆ ಹಣ ಕೊಟ್ಟು ಮಹಿಳೆಯರನ್ನು ಕರೆಸಿಕೊಂಡಿರುವ ಆರೋಪ ಇದೀಗ ಕೇಳಿಬಂದಿದೆ. ಟೋಕನ್ ಕೊಟ್ಟು ಸಿಎಂ ಸಮಾವೇಶಕ್ಕೆ ಜನರನ್ನು ಕರೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

300 ರೂ. ಕೊಡುವುದಾಗಿ ಮಹಿಳೆಯರಿಗೆ ಆಮಿಷವೊಡ್ಡಲಾಗಿತ್ತು ಎನ್ನಲಾಗಿದೆ. ಟೋಕನ್ ಸಮೇತ ಮಹಿಳೆಯರು ಮಾತನಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಕಾಂಗ್ರೆಸ್​​ನವರು 300 ರೂ. ಕೊಡುವುದಾಗಿ ಹೇಳಿದ್ದರು ಎಂದು ಕೆಲವು ಮಹಿಳೆಯರು ಹೇಳುತ್ತಿರುವುದು ವಿಡಿಯೋದಲ್ಲಿದೆ.

ಬಳ್ಳಾರಿಯ ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುರುವಾರ ಅಬ್ಬರದ ಪ್ರಚಾರ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ, ಸಿಎಂಗೆ ಕಾಣಿಕೆ ಕೊಡುವುದಕ್ಕೆ ಅಭಿಮಾನಿಗಳು ಕುರಿ ತಂದಿದ್ದು ವಿಶೇಷವಾಗಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ