ಮೈಸೂರು-ಟಿ.ನರಸೀಪುರ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಕಾರು ತಪಾಸಣೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 01, 2024 | 7:42 PM

ಲೋಕಸಭೆ ಚುನಾವಣೆ(Lok sabha election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಂತೆ ಇಂದು(ಏ.01) ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ(siddaramaiah) ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಮೈಸೂರು, ಏ.01: ಲೋಕಸಭೆ ಚುನಾವಣೆ(Lok sabha election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಂತೆ ಇಂದು(ಏ.01) ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ(siddaramaiah) ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ, ಅಧಿಕಾರಿಗಳು ಕಾರಿನಲ್ಲಿದ್ದ ಸೂಟಕೇಸ್, ಬ್ಯಾಗ್, ಡ್ಯಾಷ್ ಬೋರ್ಡ್ ಸೇರಿ ಎಲ್ಲಾ ಕಡೆಗಳಲ್ಲೂ ತಪಾಸಣೆ ನಡೆಸಿದ್ದಾರೆ. ಟಿ.ನರಸೀಪುರದಲ್ಲಿ ಕಾರ್ಯಕ್ರಮ ಮುಗಿಸಿ ತೆರಳುವಾಗ ತಪಾಸಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ