ಜೆಡಿಎಸ್, ಬಿಜೆಪಿಯವರಿಗೆ ಧಮ್, ತಾಕತ್ ಇದ್ರೆ ಒಂದೇ ವೇದಿಕೆಗೆ ಬರಲಿ: ಸಿಎಂ ಸಿದ್ದರಾಮಯ್ಯ ಸವಾಲು
ಚಿಕ್ಕಮಗಳೂರು ಸುಭಾಷ್ ಚಂದ್ರ ಬೋಸ್ ಮೈದಾನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೆಡಿಎಸ್, ಬಿಜೆಪಿಯವರಿಗೆ ಧಮ್, ತಾಕತ್ ಇದ್ದರೆ ಒಂದೇ ವೇದಿಕೆಗೆ ಬರಲಿ ಎಂದು ಸವಾಲು ಹಾಕಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಗ್ಯಾರಂಟಿ ಜಾರಿಯಾದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತೆ ಎಂದಿದ್ದರು.
ಚಿಕ್ಕಮಗಳೂರು, ಮಾರ್ಚ್ 3: ಬಿಜೆಪಿಯವರು 40% ಕಮಿಷನ್ ಪಡೆದು ರಾಜ್ಯ ಲೂಟಿ ಮಾಡಿದರು. ಜೆಡಿಎಸ್, ಬಿಜೆಪಿಯವರಿಗೆ ಧಮ್, ತಾಕತ್ ಇದ್ದರೆ ಒಂದೇ ವೇದಿಕೆಗೆ ಬರಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದ್ದಾರೆ. ನಗರದ ಸುಭಾಷ್ ಚಂದ್ರ ಬೋಸ್ ಮೈದಾನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಗ್ಯಾರಂಟಿ ಜಾರಿಯಾದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತೆ ಎಂದಿದ್ದರು. ಚಿಕ್ಕಮಗಳೂರು ಜಿಲ್ಲೆಗೆ 488 ಕೋಟಿ 86 ಲಕ್ಷ ರೂ. ಅನುದಾನ ಬಂದಿದೆ ಎಂದು ಹೇಳಿದ್ದಾರೆ. ಸಂಸ್ಕೃತಿಕ ರಾಯಭಾರಿಯಾಗಿ ಬಸವಣ್ಣ ಅವರನ್ನ ಮಾಡಿದ್ದು ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಸರ್ಕಾರ ಮತ್ತು ನಾನು. ಬಿಜೆಪಿ ಅವರು ಏನೂ ಮಾಡಿದರು ನಿಮ್ಗೆ ಗೊತ್ತಲ್ಲ ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.