Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Jan 10, 2025 | 10:32 PM

ಕರ್ನಾಟಕದಲ್ಲಿ ಆರು ನಕ್ಸಲರು ಶರಣಾದ ನಂತರ ಅವರ ಶಸ್ತ್ರಾಸ್ತ್ರಗಳು ನಾಪತ್ತೆ ಬಗ್ಗೆ ಚರ್ಚೆ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಈ ವಿಷಯದಲ್ಲಿ ಟೀಕಿಸುತ್ತಿದೆ. ನಕ್ಸಲರ ಶರಣಾಗತಿಯ ಹಿಂದಿನ ಕಾರಣಗಳು ಮತ್ತು ಭವಿಷ್ಯದ ಭದ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

ಮೈಸೂರು, ಜನವರಿ 10: ಕರ್ನಾಟಕದಲ್ಲಿ ಆರು ಜನ ನಕ್ಸಲರು ಶರಣಾಗುವುದರ ಮೂಲಕ ಕರ್ನಾಟಕದಲ್ಲಿ ನಕ್ಸಲಿಸಂಗೆ (Naxals) ಕಡಿವಾಣ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಆದರೆ ಮೋಸ್ಟ್‌ ವಾಂಟೆಡ್‌ ನಕ್ಸಲರು ಶರಣಾಗತರಾದರೂ ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳು ಎಲ್ಲಿ ಇಟ್ಟಿದ್ದಾರೆ. ಶರಣಾಗುವಾಗ ಯಾವ ಕಾರಣಕ್ಕೆ ಶಸ್ತ್ರಾಸ್ತ್ರ ಸಲ್ಲಿಕೆ ಮಾಡಿಲ್ಲ ಎನ್ನುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ವಿಪಕ್ಷ ಬಿಜೆಪಿ ಸಹ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸುತ್ತಲೇ ಇದೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ, ನಕ್ಸಲರ ಶಸ್ತ್ರಾಸ್ತ್ರಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಶಸ್ತ್ರಾಸ್ತ್ರ ಎಲ್ಲಿದೆ ಎಂದು ಗೊತ್ತಿದೆ, ಮಹಜರು ಮಾಡಿ ತರುತ್ತಾರೆ. ಕರ್ನಾಟಕದಲ್ಲಿ ನಕ್ಸಲಿಸಂ ಇರಬಾರದು ಎಂಬುದು ನಮ್ಮ ಉದ್ದೇಶ. ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಯಬಾರದೆಂಬುದು ಉದ್ದೇಶ. ಮತ್ತೊಬ್ಬ ನಕ್ಸಲ್ ಇದ್ದಾನೋ ಇಲ್ಲವೋ ನಮಗೆ ಮಾಹಿತಿಯಿಲ್ಲ. ಮುಖ್ಯವಾಹಿನಿಗೆ ಬರುವಂತೆ ಆತನಿಗೂ ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.