ಜಾತಿಗಣತಿ ಮುಂದೂಡಿಕೆಯಾಗುತ್ತಾ? ಈ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ, ಅಂತೆ-ಕಂತೆಗಳಿಗೆ ತೆರೆ

Updated on: Sep 19, 2025 | 4:42 PM

ಕರ್ನಾಟಕದಲ್ಲಿ ಜಾತಿ ಜನಗಣತಿ ಜ್ವಾಲೆ ಜೋರಾಗಿದ್ದು, ಈ ಸಂಬಂಧ ಸಚಿವರು ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಸಮೀಕ್ಷೆಯನ್ನು ಸದ್ಯ ಮುಂದೂಡಿ ಎಂಬ ಒತ್ತಡ ಹೆಚ್ಚಾಗಿದೆ. ಈ ಸಂಬಂಧ ಸಂಪುಟ ಸಭೆಯಲ್ಲೇ ಸಮೀಕ್ಷೆಯನ್ನು ಕೈಬಿಡಬೇಕು ಅಥವಾ ಮುಂದೂಡಬೇಕು ಎಂಬ ಮಾತುಗಳು ಕೇಳಿಬಂದಿವೆ. ಇದರ ನಡುವೆಯೂ ಕೆಲವೊಂದು ಗೊಂದಲ ನಿವಾರಣೆಗೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದೀಗ ಯಾವುದೇ ಕಾರಣಕ್ಕೂ ಜಾತಿಗಣತಿ ಮುಂದೂಡಿಕೆಯಾಗಲ್ಲ. ಬಿಜೆಪಿಯವರು ನಮ್ಮ ಸರ್ಕಾರವನ್ನು ಹಿಂದೂ ವಿರೋಧಿ ರೀತಿ ಬಿಂಬಿಸಲು ಹೊರಟಿದೆ ಅಷ್ಟೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಅಂತೆ ಕಂತೆಗಳಿಗೆ ತೆರೆಬಿದ್ದಿದೆ.

ಬೆಂಗಳೂರು, (ಸೆಪ್ಟೆಂಬರ್ 19): ಕರ್ನಾಟಕದಲ್ಲಿ ಜಾತಿ ಜನಗಣತಿ ಜ್ವಾಲೆ ಜೋರಾಗಿದ್ದು, ಈ ಸಂಬಂಧ ಸಚಿವರು ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಸಮೀಕ್ಷೆಯನ್ನು ಸದ್ಯ ಮುಂದೂಡಿ ಎಂಬ ಒತ್ತಡ ಹೆಚ್ಚಾಗಿದೆ. ಈ ಸಂಬಂಧ ಸಂಪುಟ ಸಭೆಯಲ್ಲೇ ಸಮೀಕ್ಷೆಯನ್ನು ಕೈಬಿಡಬೇಕು ಅಥವಾ ಮುಂದೂಡಬೇಕು ಎಂಬ ಮಾತುಗಳು ಕೇಳಿಬಂದಿವೆ. ಇದರ ನಡುವೆಯೂ ಕೆಲವೊಂದು ಗೊಂದಲ ನಿವಾರಣೆಗೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದೀಗ ಯಾವುದೇ ಕಾರಣಕ್ಕೂ ಜಾತಿಗಣತಿ ಮುಂದೂಡಿಕೆಯಾಗಲ್ಲ. ಬಿಜೆಪಿಯವರು ನಮ್ಮ ಸರ್ಕಾರವನ್ನು ಹಿಂದೂ ವಿರೋಧಿ ರೀತಿ ಬಿಂಬಿಸಲು ಹೊರಟಿದೆ ಅಷ್ಟೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಅಂತೆ ಕಂತೆಗಳಿಗೆ ತೆರೆಬಿದ್ದಿದೆ.

Published on: Sep 19, 2025 04:38 PM
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More