ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ

Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on: Dec 25, 2024 | 5:52 PM

ಬಂಧನ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಬಂಧನದ ಬಳಿಕ ಸಿಟಿ ರವಿ ಅವರನ್ನು ಪೊಲೀಸರು ನಡೆಸಿಕೊಂಡ ರೀತಿ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ. ಅದರಲ್ಲೂ ಕೋರ್ಟ್​ ಸಹ ಪೊಲೀಸರ ನಡೆಗೆ ಅಮಸಾಧಾನ ಹೊರಹಾಕಿದೆ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಸಿಪಿಯನನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಕಾರಣವನ್ನೂ ಸಹ ನೀಡಿದ್ದಾರೆ.

ಬೆಳಗಾವಿ, (ಡಿಸೆಂಬರ್ 25): ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಖಾನಾಪುರ ಪೊಲೀಸ್​ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ಆದ್ರೆ, ಏಕೆ ಅಮಾನತು ಮಾಡಲಾಗಿದೆ ಎನ್ನುವ ಚರ್ಚೆಗಳು ಶುರುವಾಗಿವೆ. ಸಿಟಿ ರವಿ ಅವರನ್ನು ಅರೆಸ್ಟ್ ಮಾಡಿ ಬಳಿಕ ನಡೆದುಕೊಂಡ ರೀತಿಗೆ ಅಮಾನತ್ತು ಮಾಡಲಾಗಿದ್ಯಾ? ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಇದೀಗ ಅದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪೊಲೀಸ್ ಠಾಣೆಯಲ್ಲಿ ಬಿಜೆಪಿಗರಿಗೆ ಸಭೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಪೊಲೀಸ್ ಇನ್ಸ್​ಪೆಕ್ಟರ್​ ಸಭೆ ಮಾಡಲು ಅವಕಾಶ ಕೊಟ್ಟರು. ಠಾಣೆಯಲ್ಲಿ ಬಿಜೆಪಿಯವರು ಬಂದು ಸಭೆ ಮಾಡಬಹುದಾ? ಹಾಗಾಗಿ ಸಿಪಿಐ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದೇವೆ‌‌ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.