ಡಿಕೆಶಿ ತೆರಳುತ್ತಿದ್ದಂತೆಯೇ ಸಿಎಂ ಜತೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚಿಸಿದ ಸಚಿವರು!
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಚಿವ ಸಂಪುಟ ಸದಸ್ಯರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಮಹತ್ವದ ರಾಜಕೀಯ ಚರ್ಚೆಗಳು ನಡೆದಿವೆ. ಈ ವೇಳೆ ಸಿಎಂ ಸಿದ್ದರಾಮಯ್ಯನವರು ಸಚಿವರುಗಳಿಗೆ ಕೆಲ ಸಲಹೆ ಸೂಚನೆಗಳನ್ನು ಸಹ ನೀಡಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಊಟ ಮುಗಿಸಿಕೊಂಡು ಹೋಗುತ್ತಿದ್ದಂತೆಯೇ ಕೆಲ ಸಚಿವರು ಸಿಎಂ ಮುಂದೆ ನಾಯಕತ್ವ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಬೆಂಗಳೂರು, (ಅಕ್ಟೋಬರ್ 13): ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಚಿವ ಸಂಪುಟ ಸದಸ್ಯರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಮಹತ್ವದ ರಾಜಕೀಯ ಚರ್ಚೆಗಳು ನಡೆದಿವೆ. ಈ ವೇಳೆ ಸಿಎಂ ಸಿದ್ದರಾಮಯ್ಯನವರು ಸಚಿವರುಗಳಿಗೆ ಕೆಲ ಸಲಹೆ ಸೂಚನೆಗಳನ್ನು ಸಹ ನೀಡಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಊಟ ಮುಗಿಸಿಕೊಂಡು ಹೋಗುತ್ತಿದ್ದಂತೆಯೇ ಕೆಲ ಸಚಿವರು ಸಿಎಂ ಮುಂದೆ ನಾಯಕತ್ವ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಹೌದು…ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯನವರ ಬಣದಲ್ಲಿ ಭಾರೀ ಚರ್ಚೆಯಾಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬಾಯಿಂದಲೇ ಕೇಳಿಬಿಡಬೇಕೆಂದು ಡಿಕೆ ಶಿವಕುಮಾರ್ ತೆರಳುತ್ತಿದ್ದಂತೆಯೇ ಕೆಲ ಸಚಿವರು ನಾಯಕತ್ವ ಬದಲಾವಣೆ ಬಗ್ಗೆ ಸಿದ್ದರಾಮಯ್ಯನವರನ್ನು ಕೇಳಿದ್ದಾರೆ. ಸಚಿವರ ಈ ಮಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾಯಕತ್ವದ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಒಂದೇ ಮಾತಿನಲ್ಲಿ ಸಿಎಂ ಸ್ಥಾನದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಕ್ಷ ಸಂಘಟನೆ ಜವಾಬ್ದಾರಿಗೆ ಸಿದ್ಧರಿರುವಂತೆ ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ. ಈ ಮೂಲಕ ಸಚಿವ ಸ್ಥಾನ ಬಿಡಲು ಮಾನಸಿಕವಾಗಿ ಸಿದ್ಧರಿರಿ ಎಂಬ ಅರ್ಥದಲ್ಲಿ ಪರೋಕ್ಷವಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
