ಅರೇ..ಏನಾಯ್ತು..!ವ್ಹೀಲ್ ಚೇರ್ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ
ಇಂದು ಕೇಂದ್ರ ರಕ್ಷಣಾ ಸಚಿವ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಚಾಲನೆ ನೀಡಿದರು, ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಮಾವೇಶಕ್ಕೆ ಆಗಮಿಸಿದ್ದು, ವೇದಿಕೆಗೆ ವ್ಹೀಲ್ ಚೇರ್ನಲ್ಲೇ ಬಂದಿದ್ದಾರೆ. ಮಂಡಿನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ವ್ಹೀಲ್ ಚೇರ್ ಮೂಲಕ ಬಂದು ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಪಾಲ್ಗೊಂಡರು.
ಬೆಂಗಳೂರು, (ಫೆಬ್ರವರಿ 11): ಬೆಂಗಳೂರಿನ ಅರಮನೆ ಮೈದಾನದಲ್ಲಿಂದು (ಫೆಬ್ರವರಿ 11) ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಗೆ ಚಾಲನೆ ಸಿಕ್ಕಿದೆ. ಬೃಹತ್ ಕೈಗಾರಿಕಾ ಇಲಾಖೆ ಅಡಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು. ಇನ್ನು ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವ್ಹೀಲ್ ಚೇರ್ನಲ್ಲಿ ಬಂದು ಗಮನಸೆಳೆದರು. ಮಂಡಿನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯನವರು ಮೊನ್ನೆ ಅಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಜೆಟ್ ಪೂರ್ವ ಸಿದ್ಧತೆ ಸಭೆಗಳನ್ನು ಕಾವೇರಿ ನಿವಾಸದಲ್ಲೇ ಮಾಡಿದ್ದರು. ಇದೀಗ ಇನ್ವೆಸ್ಟ್ ಕರ್ನಾಟಕ ಸಮಾವೇಶದ ವೇದಿಕೆಗೆ ವ್ಹೀಲ್ ಚೇರ್ನಲ್ಲೇ ಬಂದಿದ್ದಾರೆ.

ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್ಎಸ್ಎಸ್ ಪ್ರಧಾನ ಕಚೇರಿಗೆ ಮೋದಿ ಭೇಟಿ

ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ

ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
