ಅರೇ..ಏನಾಯ್ತು..!ವ್ಹೀಲ್​ ಚೇರ್​ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ

Updated on: Feb 11, 2025 | 5:46 PM

ಇಂದು ಕೇಂದ್ರ ರಕ್ಷಣಾ ಸಚಿವ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಚಾಲನೆ ನೀಡಿದರು, ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಮಾವೇಶಕ್ಕೆ ಆಗಮಿಸಿದ್ದು, ವೇದಿಕೆಗೆ ವ್ಹೀಲ್​ ಚೇರ್​ನಲ್ಲೇ ಬಂದಿದ್ದಾರೆ. ಮಂಡಿನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ವ್ಹೀಲ್​ ಚೇರ್​ ಮೂಲಕ ಬಂದು ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಪಾಲ್ಗೊಂಡರು.

ಬೆಂಗಳೂರು, (ಫೆಬ್ರವರಿ 11): ಬೆಂಗಳೂರಿನ ಅರಮನೆ ಮೈದಾನದಲ್ಲಿಂದು (ಫೆಬ್ರವರಿ 11) ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಗೆ ಚಾಲನೆ ಸಿಕ್ಕಿದೆ. ಬೃಹತ್ ಕೈಗಾರಿಕಾ ಇಲಾಖೆ ಅಡಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು. ಇನ್ನು ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವ್ಹೀಲ್​ ಚೇರ್​ನಲ್ಲಿ ಬಂದು ಗಮನಸೆಳೆದರು. ಮಂಡಿನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯನವರು ಮೊನ್ನೆ ಅಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಜೆಟ್​ ಪೂರ್ವ ಸಿದ್ಧತೆ ಸಭೆಗಳನ್ನು ಕಾವೇರಿ ನಿವಾಸದಲ್ಲೇ ಮಾಡಿದ್ದರು. ಇದೀಗ ಇನ್ವೆಸ್ಟ್ ಕರ್ನಾಟಕ ಸಮಾವೇಶದ ವೇದಿಕೆಗೆ ವ್ಹೀಲ್ ಚೇರ್​ನಲ್ಲೇ ಬಂದಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More