ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ ಸಿದ್ದರಾಮಯ್ಯ
ಇಸ್ರೇಲ್ ಮತ್ತು ಅಮೆರಿಕದ ಇರಾನ್ ಮೇಲಿನ ದಾಳಿ ಅನಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದೆಡೆ ಶಾಂತಿ ಮಂತ್ರ ಪಠಿಸಿ, ಮತ್ತೊಂದೆಡೆ ಯುದ್ಧವನ್ನು ಪ್ರಚೋದಿಸುವ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಸಿಎಂ ಖಂಡಿಸಿದ್ದಾರೆ. ಅಯತೊಲ್ಲಾ ಖೊಮೇನಿ ಅವರ ಸಾವಿನ ವರದಿ ಖಂಡನೀಯವಾಗಿದ್ದು, ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಂಡಿದೆ.
ಶಿವಮೊಗ್ಗ, ಮಾರ್ಚ್ 01: ಈ ಯುದ್ಧ ಅಗತ್ಯ ಇರಲಿಲ್ಲ. ಅಮೆರಿಕ ಅಧ್ಯಕ್ಷ ಟ್ರಂಪ್ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇರಾನ್ ಮೇಲೆ ಇಸ್ರೇಲ್-ಅಮೆರಿಕದಿಂದ ಜಂಟಿ ದಾಳಿ ವಿಚಾರವಾಗಿ ಶಿವಮೊಗ್ಗ ಏರ್ಪೋರ್ಟ್ನಲ್ಲಿ ಮಾತನಾಡಿದ ಅವರು, ಒಂದೆಡೆ ಶಾಂತಿ ಮಂತ್ರ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ದಾಳಿ ವೇಳೆ ಇರಾನ್ ಪರಮೋಚ್ಛ ನಾಯಕ ಖಮನೈ ಹತ್ಯೆಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಖಮೇನಿ ಹತ್ಯೆ ಮಾಡಿದ್ದು ಖಂಡನೀಯ ಎಂದಿದ್ದಾರೆ. ಇನ್ನು ಯುದ್ಧ ಆರಂಭವಾದ ಮೇಲೆ ಕನ್ನಡಿಗರು ಸಿಲುಕಿಕೊಂಡಿದ್ದಾರೆ, ಅವರ ರಕ್ಷಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
