ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ ಸತೀಶ್ ಜಾರಕಿಹೊಳಿ ಸೇರಿ 7 ಮಂದಿ ಸಚಿವರ ಪಟಲಾಂ ರಾಜಧಾನಿಗೆ ದೌಡು!

Edited By:

Updated on: May 25, 2026 | 5:34 PM

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಪ್ರಿಯಾಂಕ್ ಖರ್ಗೆ ಕೂಡ ತೆರಳುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯ ರಾಜಕೀಯ, ಪಕ್ಷ ಸಂಘಟನೆ ಮತ್ತು ಜವಾಬ್ದಾರಿ ಹಂಚಿಕೆ ಕುರಿತು ಹಿರಿಯ ನಾಯಕರೊಂದಿಗೆ ಕೂಲಂಕಷ ಚರ್ಚೆ ನಡೆಸುವ ನಿರೀಕ್ಷೆಯಿದೆ.

ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಲವು ಹಿರಿಯ ಸಚಿವರೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಹಾಗೂ ಸಚಿವರು ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ರಾಜ್ಯ ರಾಜಕೀಯದ ಕುರಿತು ಮಹತ್ವದ ಚರ್ಚೆ ನಡೆಸುವ ನಿರೀಕ್ಷೆಯಿದೆ. ಈ ಭೇಟಿಯು ಸಿಎಂ ಮತ್ತು ಡಿಸಿಎಂ ಮಟ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಐಟಿಬಿಟಿ ಪ್ರಿಯಾಂಕ್ ಖರ್ಗೆ ಅವರಂತಹ ಇತರ ಪ್ರಮುಖ ಸಚಿವರು ಕೂಡ ದೆಹಲಿಗೆ ತೆರಳುತ್ತಿರುವುದು ಕುತೂಹಲ ಹೆಚ್ಚಿಸಿದೆ.

ಸಿದ್ದರಾಮಯ್ಯ ಮಾತ್ರವಲ್ಲದೆ ಸಚಿವರಾದ ಹೆಚ್​ಕೆ ಪಾಟೀಲ್, ಹೆಚ್​ಸಿ ಮಹದೇವಪ್ಪ, ಬೈರತಿ ಸುರೇಶ್, ಕೆಜೆ ಜಾರ್ಜ್ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ ಸಹ ದೆಹಲಿಗೆ ತೆರಳುತ್ತಿದ್ದಾರೆ. ರಾಜ್ಯದ ಆರು ತಿಂಗಳಿನಿಂದ ನಡೆಯುತ್ತಿರುವ ಕೆಲ ವಿಷಯಗಳು ಈ ಸಭೆಯ ಪ್ರಮುಖ ಅಜೆಂಡಾ ಆಗುವ ಸಾಧ್ಯತೆಯಿದೆ. ರಾಜ್ಯಸಭೆ ಚುನಾವಣೆ ಹಾಗೂ ಎಂಎಲ್ಸಿಗಳ ಕುರಿತು ಚರ್ಚಿಸಲು ಹೈಕಮಾಂಡ್ ಈ ನಾಯಕರನ್ನು ದೆಹಲಿಗೆ ಕರೆದಿದೆ ಎಂದು ಹೇಳಲಾಗಿದೆ. ಆದರೆ, ಒಟ್ಟಾರೆಯಾಗಿ ಪ್ರಮುಖ ನಾಯಕರ ದೆಹಲಿ ಭೇಟಿ ವೇಳೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us