ದೆಹಲಿ ತಲುಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತಾಡದೆ ಹೊರಟರು
ಕರ್ನಾಟಕ ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ನಬಾರ್ಡ್ ಶೇಕಡ 58ರಷ್ಟು ಇಳಿಕೆ ಮಾಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಹ ಭೇಟಿಯಾಗಲಿದ್ದಾರೆ. ಅವರ ಟೂರ್ ಪ್ರೋಗ್ರಾಂನಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗುವ ಅಂಶವಿಲ್ಲ.
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಅವರೊಂದಿಗೆ ದೆಹಲಿ ತಲುಪಿದ್ದಾರೆ. ನಂದಿನಿ ಉತ್ಪನ್ನಗಳ ಲಾಂಚ್ ಕಾರ್ಯಕ್ರಮಕ್ಕೆ ತೆರಳುವಾಗ ಮುಖ್ಯಮಂತ್ರಿ ಗಂಭೀರ ಮುಖಭಾವ ಹೊಂದಿದ್ದರು. ಮಾಧ್ಯಮ ಪ್ರತಿನಿಧಿಗಳು ಅವರೊಂದಿಗೆ ಮಾತಾಡುವ ಪ್ರಯತ್ನ ಮಾಡಿದರಾದರೂ ಕಾರಿನಲ್ಲಿ ಕುಳಿತ ಸಿದ್ದರಾಮಯ್ಯ ಮಾತಾಡದೆ ತಮ್ಮ ಬಲಗೈ ಬೀಸುತ್ತಾ ಅಲ್ಲಿಂದ ಹೊರಟುಬಿಟ್ಟರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಸವಣ್ಣನವರ ಕೆಲವು ತತ್ವಗಳನ್ನಾದರೂ ಪಾಲಿಸುವ ಪ್ರಯತ್ನ ಮಾಡುತ್ತಿದ್ದೇನೆ: ಸಿದ್ದರಾಮಯ್ಯ
Latest Videos