ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು

ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು

ವಿವೇಕ ಬಿರಾದಾರ
|

Updated on:Sep 24, 2024 | 2:55 PM

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಇದೀಗ ಸಿಎಂ ಸಿದ್ದರಾಮಯ್ಯ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ತಯಾರಿ ನಡೆಸಿದ್ದು, ಈ ವಿಚಾರವಾಗಿ ವಕೀಲ ರಂಗನಾಥ್​ ರೆಡ್ಡಿ ಮಾತನಾಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ​​​ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ​ಎತ್ತಿ ಹಿಡಿದಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಈ ವಿಚಾರವಾಗಿ ವಕೀಲ ರಂಗನಾಥ್​ ರೆಡ್ಡಿ ಮಾತನಾಡಿ, ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದರೂ ಅವರಿಗೆ ರಿಲಿಫ್​ ಸಿಗುವುದು ಅನುಮಾನವಿದೆ ಎಂದು ಹೇಳಿದರು.

ಟಿವಿ9 ಪ್ರತಿನಿಧಿ ಜೊತೆ ಮಾತನಾಡಿದ ಅವರು, ರಾಜ್ಯಪಾಲರ ಅನುಮೋದನೆ ನ್ಯಾಯಬ್ಧವಾಗಿದೆ ಎಂದು ಹೈಕೋರ್ಟ್​ ಹೇಳಿದರು. ಖಾಸಗಿ ದೂರುಗಳು ಕೂಡ ತನಿಖೆಯಾಗಲೇಬೇಕು. ಏಕ ಸದಸ್ಯ ಪೀಠ ಎಲ್ಲ ಅಂಶಗಳನ್ನು ಪರಿಗಣಿಸಿ ಆದೇಶ ನೀಡಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಕುಟುಂಬದ ಪಾತ್ರ ಇದೆ ಅಂತ ನ್ಯಾಯಾಧೀಶರು ಹೇಳಿದ್ದಾರೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಬಹುದು. ಆದರೆ, ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದರೂ ಅವರಿಗೆ ರಿಲಿಫ್​ ಸಿಗುವುದು ಅನುಮಾನವಿದೆ ಎಂದು ಹೇಳಿದರು.

ಇದನ್ನೂ ಓದಿ: ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ: ವಿಜಯೇಂದ್ರ, ಅಶೋಕ್​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Sep 24, 2024 01:36 PM