ಡಿಕೆ ಶಿವಕುಮಾರ್ ಜೊತೆಗೆ ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿಯುತ್ತಿರುವ ಸಿಎಂ ಸಿದ್ದರಾಮಯ್ಯ

Updated on: Dec 02, 2025 | 10:52 AM

ಕರ್ನಾಟಕ ಕಾಂಗ್ರೆಸ್ ಪಕ್ಷದ ಆಂತರಿಕ ಸಂಘರ್ಷ ತಣ್ಣಗಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಣ ಬ್ರೇಕ್ಫಾಸ್ಟ್ ಮೀಟಿಂಗ್ ಮುಂದುವರೆದಿದೆ. ಡಿಕೆಶಿ ಅವರ ಸದಾಶಿವನಗರ್ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ ಸಿದ್ದರಾಮಯ್ಯ ಉಪಹಾರ ಸೇವಿಸಿದರು. ಬ್ರೇಕ್​ಫಾಸ್ಟ್ ಮೀಟಿಂಗ್​​ನ ದೃಶ್ಯ ಇಲ್ಲಿದೆ ನೋಡಿ.

ಬೆಂಗಳೂರು, ಡಿಸೆಂಬರ್ 2: ಕರ್ನಾಟಕ ಕಾಂಗ್ರೆಸ್​ನಲ್ಲಿ ಎದ್ದಿದ್ದ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಣ ‘ಬ್ರೇಕ್​ಫಾಫಾಸ್ಟ್ ಮೀಟಿಂಗ್’ ಮುಂದುವರಿದಿದೆ. ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದರು. ಜತೆಗೆ ಮಾತುಕತೆಯೂ ನಡೆಯಿತು. ಆದರೆ, ಡಿಕೆ ಶಿವಕುಮಾರ್ ಮಾತ್ರ ಉಪಾಹಾರ ಕೂಟದಲ್ಲಿ ನಾನ್ ವೆಜ್ ಸೇವಿಸಲಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ