ಪುಸ್ತಕ ಮೇಳದಲ್ಲಿ ತಮ್ಮ ಮೇಲೆ ಬರೆದಿರುವ ಪುಸ್ತಕ ಕಂಡು ಸಂತೋಷಭರಿತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ

Updated on: Feb 27, 2025 | 7:07 PM

ನಮ್ಮ ವರದಿಗಾರ ನೀಡುವ ಮಾಹಿತಿಯ ಪ್ರಕಾರ ಸುಮಾರು 175 ಪ್ರಕಾಶನ ಸಂಸ್ಥೆಗಳಲ್ಲದೆ ಕರ್ನಾಟಕ ಪುಸ್ತಕ ಪ್ರಾಧಿಕಾರ ಸ್ಟಾಲ್​​ಗಳನ್ನು ಹಾಕಿವೆ. ಮಾರ್ಚ್ 3ರವರೆಗೆ ನಡೆಯಲಿರುವ ಮೇಳದಲ್ಲಿ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದಂತೆ. ವಿಧಾನ ಮಂಡಲದ ಬಜೆಟ್ ಅಧಿವೇಶನ ಮಾರ್ಚ್ 3ರಿಂದ ಆರಂಭವಾಗಲಿರುವುದರಿಂದ ಜನಪ್ರತಿನಿಧಿಗಳು ಸಹ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಬೆಂಗಳೂರು: ಮೊದಲ ಬಾರಿಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳವೊಂದನ್ನು (book exhibition) ಆಯೋಜಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದರು. ವ್ಹೀಲ್ ಚೇರ್ ನಲ್ಲಿ ಪುಸ್ತಕ ಮೇಳಕ್ಕೆ ಆಗಮಿಸಿದ ಮುಖ್ಯಮಂತ್ರಿಯವರಿಗೆ ಅವರ ಬದುಕಿನ ಮೇಲೆ ಬರೆದಿರುವ ನಾವು ಕಂಡಂತೆ ಸಿದ್ದರಾಮಯ್ಯ ಹೆಸರಿನ ಪುಸ್ತಕವನ್ನು ತೋರಿಸಿದಾಗ ಬಹಳ ಸಂತೋಷಪಟ್ಟರು. ಲೇಖಕರನ್ನು ತತ್ವ ಸತ್ವದ ಸಂಗಮ ಅಂತ ಉಲ್ಲೇಖಿಸಲಾಗಿದೆ. 5-ದಿನ ನಡೆಯಲಿರುವ ಪುಸ್ತಕ ಮೇಳದಲ್ಲಿ ಕವಿಗೋಷ್ಠಿ, ಸಂವಾದ, ಪುಸ್ತಕ ಬಿಡುಗಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿದ್ದರಾಮಯ್ಯಗೆ ವಿಪರೀತವಾಗಿ ಕಾಡುತ್ತಿದೆ ಮಂಡಿನೋವು: ಈ ವಿಡಿಯೋ ನೋಡಿದ್ರೆ ನಿಮಗೆ ಗೊತ್ತಾಗುತ್ತೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More