ದೆಹಲಿ ಸ್ಫೋಟ ಬೆನ್ನಲ್ಲೇ ಕರ್ನಾಟಕದಲ್ಲೂ ಹೈಅಲರ್ಟ್: ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು
ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಇಡೀ ದೇಶವೇ ಬೆಚ್ಚಿಬಿದ್ದಿದ್ದು, ದೇಶಾದ್ಯಂತ ಹೈಅಲರ್ಟ್ ಘೋಷಿಸಿದಲಾಗಿದೆ. ಅದರಂತೆ ಕರ್ನಾಟಕದಲ್ಲೂ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ. ಇನ್ನು ದೆಹಲಿ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು, ಮೈಸೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ದೆಹಲಿ ಸ್ಫೋಟದ ಬಗ್ಗೆ ತಿಳಿದ ಬಳಿಕ ಮೈಸೂರು ಪೊಲೀಸರ ಜತೆ ಮಾತನಾಡಿದ್ದು, ರಾಜ್ಯಾದ್ಯಂತ ಭದ್ರತೆ ಬಿಗಿಗೊಳಿಸಲು ತಿಳಿಸಿದ್ದೇನೆ ಹೇಳಿದ್ದಾರೆ.
ಮೈಸೂರು, ನವೆಂಬರ್ 10): ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಇಡೀ ದೇಶವೇ ಬೆಚ್ಚಿಬಿದ್ದಿದ್ದು, ದೇಶಾದ್ಯಂತ ಹೈಅಲರ್ಟ್ ಘೋಷಿಸಿದಲಾಗಿದೆ. ಅದರಂತೆ ಕರ್ನಾಟಕದಲ್ಲೂ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ. ಇನ್ನು ದೆಹಲಿ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು, ಮೈಸೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ದೆಹಲಿ ಸ್ಫೋಟದ ಬಗ್ಗೆ ತಿಳಿದ ಬಳಿಕ ಮೈಸೂರು ಪೊಲೀಸರ ಜತೆ ಮಾತನಾಡಿದ್ದು, ರಾಜ್ಯಾದ್ಯಂತ ಭದ್ರತೆ ಬಿಗಿಗೊಳಿಸಲು ತಿಳಿಸಿದ್ದೇನೆ ಹೇಳಿದ್ದಾರೆ.
ಕರ್ನಾಟಕದಲ್ಲೂ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸುವ ಕೆಲಸ ಮಾಡುತ್ತೇವೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲು ಸೂಚನೆ ನೀಡಲಾಗಿದ್ದು, ದೆಹಲು ಸ್ಪೋಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದರು.
