ಚಾಮರಾಜನಗರದ ನರಿಪುರಕ್ಕೆ ಚಾಪರ್ನಲ್ಲಿ ಆಗಮಿಸಿದ ಸಿದ್ದರಾಮಯ್ಯಗೆ ಕಾರ್ಯಕರ್ತರಿಂದ ಭರ್ಜರಿ ಸ್ಚಾಗತ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಯಾವುದೇ ಸಭೆ ಸಮಾರಂಭದಲ್ಲಿ ತಮ್ಮನ್ನು ಹಾರ ತುರಾಯಿಗಳಿಂದ ಸನ್ಮಾನಿಸುವುದು ಬೇಡ ಅಂತ ಹೇಳಿದ್ದರು. ಆದರೆ ಅವರು ಎಲ್ಲಿ ಹೋದರೂ ಹೂವಿನ ಹಾರ ಮತ್ತು ಬೋಕೆಗಳಿಂದ ಸನ್ಮಾನಿಸಲಾಗುತ್ತದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರೂ ಇದೇ ಮಾತು ಹೇಳಿದ್ದರು.
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದಲ್ಲಿ ನೂತನ ಸರ್ಕಾರಿ ಶಾಲೆಯೊಂದನ್ನು ಉದ್ಘಾಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಲಿಕಾಪ್ಟರ್ನಲ್ಲಿ ನರಿಪುರ ಹೆಲಿಪ್ಯಾಡ್ ಗೆ ಆಗಮಿಸಿದರು. ಅವರೊಂದಿಗೆ ಶಿಕ್ಷಣ ಸಚಿವ ಮಧ ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್, ಮತ್ತು ಸಚಿವ ಹೆಚ್ ಸಿ ಮಹದೇವಪ್ಪ ಅವರನ್ನು ನೋಡಬಹುದು. ಅಸಲಿಗೆ ಮುಖ್ಯಮಂತ್ರಿಯನ್ನು ಜಿಲ್ಲಾಡಳಿತ ಬರಮಾಡಿಕೊಳ್ಳಬೇಕಿತ್ತು, ಆದರೆ ಹಾರ ತುರಾಯಿಗಳೊಂದಿಗೆ ಪಕ್ಷದ ಕಾರ್ಯಕರ್ತರು ನುಗ್ಗುವುದನ್ನು ನೋಡಿದರೆ ಗಾಬರಿಯಾಗುತ್ತದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ: ಸಿಎಂ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಅಚ್ಚರಿಯ ಹೇಳಿಕೆ