‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿಎಂ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಮೈಸೂರಿನ ಡಿಆರ್ಸಿ ಚಿತ್ರಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ‘ಅನ್ನ’ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ‘ಅನ್ನ ಊಟ ಮಾಡಲು ನನ್ನೂರಿನ ಜನ ಹಬ್ಬಕ್ಕೆ ಕಾಯುತ್ತಿದ್ದರು. ಈ ಸಿನಿಮಾ ನೋಡುವಾಗ ನನ್ನ ಬಾಲ್ಯದ ದಿನಗಳು ಕಣ್ಣೆದುರಿಗೆ ಬಂದವು’ ಎಂದು ಹೇಳಿದರು. ಸಿನಿಮಾಗೆ ಪ್ರಶಂಸೆ ಸೂಚಿಸಿದ ಸಿದ್ದರಾಮಯ್ಯ ಅವರು ಚಿತ್ರತಂಡಕ್ಕೆ ಶುಭ ಕೋರಿದರು.
‘ನಾನು ಕಂಡ ಹಸಿವು, ಬಡತನಗಳು ನಾಡಿನ ಯಾರೊಬ್ಬರನ್ನೂ ಬಾಧಿಸದಿರಲಿ ಎಂಬ ಕಾರಣಕ್ಕೆ ಅನ್ನಭಾಗ್ಯ ಯೋಜನೆಯನ್ನು 2013ರಲ್ಲಿ ಜಾರಿ ಮಾಡಿದೆ. ಈ ಸಿನಿಮಾದ ಕೊನೆಯಲ್ಲಿ ಈ ಯೋಜನೆಯ ಮಹತ್ವದ ಬಗ್ಗೆಯೂ ಬೆಳಕು ಚೆಲ್ಲಲಾಗಿದೆ. ಮನರಂಜನೆಯ ಜೊತೆಗೆ ಹಸಿವಿನ ಎದುರು ಬೇರೆಲ್ಲಾ ಸಂಬಂಧಗಳು ಹೇಗೆ ನಗಣ್ಯ ಎನಿಸುತ್ತವೆ ಎಂಬ ಸಂದೇಶವನ್ನು ಈ ಸಿನಿಮಾ ಒಳಗೊಂಡಿದೆ. ಈ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಶುಭವಾಗಲಿ. ಸಿನಿಮಾ ಯಶಸ್ವಿಯಾಗಿ ಮುನ್ನಡೆಯಲಿ’ ಎಂದು ‘ಅನ್ನ’ ಸಿನಿಮಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 9:23 pm, Sun, 22 September 24