Bengaluru Stampede: ಪೊಲೀಸರು ಯಾಕೆ ಬಲಿಪಶು ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಂಮಜಸ ಉತ್ತರ
ಮತ್ತಷ್ಟು ಪ್ರಶ್ನೆಗಳನ್ನು ಮಾಧ್ಯಮದವರು ಕೇಳುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸುವ ಗೋಜಿಗೆ ಹೋಗದೆ ಸ್ಥಳದಿಂದ ದೂರ ನಡೆದರು. ಬುಧವಾರ ನಡೆದ ಅನಾಹುತಕ್ಕೆ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿರೋದು ಕನ್ನಡಿಗರಲ್ಲಿ ದಿಗ್ಭ್ರಮೆ ಮೂಡಿಸಿದೆ. ಯಾಕೆಂದರೆ, ಸತ್ಕಾರ ಸಮಾರಂಭ ನಡೆಸೋದು ಬೇಡ, ಇಷ್ಟು ಶಾರ್ಟ್ ನೋಟೀಸಲ್ಲಿ ಭದ್ರತೆ ಒದಗಿಸುವುದು ಕಷ್ಟವಾಗುತ್ತದೆ ಅಂತ ಪೊಲೀಸ್ ಇಲಾಖೆ ಹೇಳಿದ್ದರೂ ಸರ್ಕಾರ ಹಠಮಾಡಿ ಕಾರ್ಯಕ್ರಮ ನಡೆಸಿತ್ತು.
ಬೆಂಗಳೂರು, ಜೂನ್ 6: ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆ ಮತ್ತು 11 ಜನರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಹೊಣೆಹೊತ್ತು ರಾಜೀನಾಮೆ ಸಲ್ಲಿಸುವ ಬದಲು ನಗರ ಪೊಲೀಸ್ ಕಮೀಷನರ್ ಬಿ ದಯಾನಂದ್ ಮತ್ತು ಇತರ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಬಲಿಪಶು ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಹೇಳುತ್ತಿರುವುದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು ಎಲ್ಲಾದರಲ್ಲೂ ರಾಜಕೀಯ ಮಾಡುತ್ತಾರೆ, ಕಾಲ್ತುಳಿದ ಘಟನೆಗೆ ಮೇಲ್ನೋಟಕ್ಕೆ ಯಾರು ಜವಾಬ್ದಾರರಾಗಿದ್ದಾರೆ, ಯಾರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿಲ್ಲ ಎಂದು ಕಂಡುಬಂದ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Bengaluru Stampede; ಪೋಲೀಸ್ ಕಮೀಶನರ್ರನ್ನು ಸಸ್ಪೆಂಡ್ ಮಾಡಿದ್ದು ಸರ್ಕಾರದ ಬೇಜವಾಬ್ದಾರಿತನ: ಜ್ಯೋತಿಪ್ರಕಾಶ್ ಮಿರ್ಜಿ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ