SM Krishna No More: ಅಗಲಿದ ನಾಯಕನ ಪತ್ನಿ ಪ್ರೇಮ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

SM Krishna No More: ಅಗಲಿದ ನಾಯಕನ ಪತ್ನಿ ಪ್ರೇಮ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 11, 2024 | 6:09 PM

SM Krishna No More: ರಾಷ್ಟ್ರಧ್ವಜವನ್ನು ಸ್ವೀಕರಿಸಲು ಪ್ರೇಮ ಅವರು ತಮ್ಮ ಮಗಳು ಹಾಗೂ ಮೊಮ್ಮಗನೊಂದಿಗೆ ಆಗಮಿಸಿದರು. ಸುಮಾರು ಆರು ದಶಕಗಳ ಕಾಲ ಎಸ್ ಎಂ ಕೃಷ್ಣ ಅವರೊಂದಿಗೆ ಸಹಬಾಳ್ವೆ ನಡೆಸಿದ ಪ್ರೇಮ ಅವರಿಗೆ ಇನ್ನು ಮುಂದೆ ಒಂಟಿತನ ಕಾಡಲಿದೆ. ಆದರೆ ಮಕ್ಕಳು ಮತ್ತು ಮೊಮ್ಮಕ್ಕಳು ಒಂಟಿತನ ಅವರ ಬಳಿ ಸುಳಿಯದಂತೆ ಎಲ್ಲ ತಯಾರಿಗಳನ್ನು ಮಾಡಿಕೊಳ್ಳುವುದು ನಿಶ್ಚಿತ.

ಮಂಡ್ಯ: ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರ ಕಂಡ ಅಪರೂಪದ ರಾಜಕಾರಣಗಳಲ್ಲಿ ಒಬ್ಬರಾಗಿದ್ದ ಎಸ್ ಎಂ ಕೃಷ್ಣ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೊದಲು ಸಂಪ್ರದಾಯದಂತೆ ಅವರ ಮೇಲೆ ಹೊದೆಸಿದ್ದ ರಾಷ್ಟ್ರಧ್ವಜವನ್ನು ಪತ್ನಿ ಪ್ರೇಮ ಕೃಷ್ಣ ಅವರಿಗೆ ನೀಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎನ್ ಚಲುವರಾಯಸ್ವಾಮಿ ಅವರು ಸರ್ಕಾರದ ಪರವಾಗಿ ತಿರಂಗವನ್ನು ಪ್ರೇಮ ಕೃಷ್ಣ ಅವರಿಗೆ ಹಸ್ತಾಂತರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: SM Krishna No More: ಅಂತಿಮ ವಿಧಿವಿಧಾನಗಳನ್ನು ಪೂರೈಸಿದ ಹಿರಿಯ ಮುತ್ಸದ್ದಿ ಮೊಮ್ಮಗ ಅಮರ್ತ್ಯ ಹೆಗಡೆ