ಕಂದಾಯ ಸಚಿವ ಕೃಷ್ಣ ಭೈರೇಗೌಡರ ಕಾರ್ಯವೈಖರಿಯನ್ನು ಮನಸಾರೆ ಕೊಂಡಾಡಿದ ಸಿದ್ದರಾಮಯ್ಯ
ಕಂದಾಯ ಸಚಿವ ಕೃಷ್ಣ ಭೈರೇಗೌಡ ತಮ್ಮ ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಹಾಗಾಗೇ ಅವರಿಗೆ ಸುದೀರ್ಘವಾಗಿ ಮಾತಾಡಲು ಸಾಧ್ಯವಾಗಿದೆ, ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡಾಗಲೇ ಅದರ ಮೇಲೆ ಹಿಡಿತ ಬರಲು ಮತ್ತು ದಕ್ಷತೆಯಿಂದ ಕೆಲಸ ಮಾಡಲು ಸಾಧ್ಯ, ಇಲಾಖೆಗೆ ಸಂಬಂಧಿಸಿದ ಅಂಕಿ-ಅಂಶಗಳನ್ನು ಕೈಬೆರಳಲ್ಲಿಟ್ಟುಕೊಂಡಿರುವ ಗೌಡರು ಸಮರ್ಥವಾಗು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು
ಬೆಂಗಳೂರು, ಏಪ್ರಿಲ್ 10: ರಾಷ್ಟ್ರೀಯ ಭೂಮಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಂದಾಯ ಸಚಿವ ಕೃಷ್ಣ ಭೈರೇಗೌಡರ ಕಾರ್ಯವೈಖರಿಯನ್ನು ಹಾಡಿ ಹೊಗಳಿದರಲ್ಲದೆ ಹಿಂದೆ 2018 ರಲ್ಲಿ ತಾವು ಭೂಮಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನ್ನು ಮೆಲಕು ಹಾಕಿದರು. ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ, ಅದಾದ ಬಳಿಕ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಆಯೋಜಿಸಿಲ್ಲವೆಂದು ಭಾವಿಸುತ್ತೇನೆ ಎಂದ ಸಿದ್ದರಾಮಯ್ಯ ಇದನ್ನು ಪ್ರತಿವರ್ಷ ಆಚರಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: ಇ-ಖಾತೆ ಪಡೆಯಲು ಯಾವುದೇ ಡೆಡ್ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos