ಕಾವೇರಿ ನದಿ ನೀರಿಗಾಗಿ ಮುಂದುವರಿದ ಹೋರಾಟ, ಸಂಸತ್ತಿನ ಕರ್ನಾಟಕ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಸಭೆ

|

Updated on: Sep 20, 2023 | 10:54 AM

ಸಿಡಬ್ಲ್ಯೂಎಂಎ ಆದೇಶದ ವಿರುದ್ಧ ಸುಪ್ರೀಮ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಯೋಚನೆ ಸರ್ಕಾರಿದ್ದು ಅದೇ ಆಧಾರದಲ್ಲಿ ಚರ್ಚೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಸಹ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ದೆಹಲಿ: ಕಾವೇರಿ ನದಿ ನೀರಿಗಾಗಿ ಕರ್ನಾಟಕ ಸರ್ಕಾರದ ಹೋರಾಟ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮೊದಲಾದವರೊಂದಿಗೆ ದೆಹಲಿಗೆ ಆಗಮಿಸಿದ್ದು, ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರೊಂದಿಗೆ (MPs of Karnataka) ನಗರದ ಖಾಸಗಿ ಹೋಟೆಲೊಂದರಲ್ಲಿ ಸಭೆಗೆ ನಡೆಸುತ್ತಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡುಗೆ ನೀರು ಬಿಡುವುದನ್ನು ಮುಂದುವರಿಸುವಂತೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮದ ಬಗ್ಗೆ ರಾಜ್ಯದ ಜನ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಕಾನೂನು ತಂಡದ ಜೊತೆ ಮಾತುಕತೆಯನ್ನು ಸಿದ್ದರಾಮಯ್ಯ ನಡೆಸಲಿದ್ದಾರೆ. ಸಿಡಬ್ಲ್ಯೂಎಂಎ ಆದೇಶದ ವಿರುದ್ಧ ಸುಪ್ರೀಮ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಯೋಚನೆ ಸರ್ಕಾರಿದ್ದು ಅದೇ ಆಧಾರದಲ್ಲಿ ಚರ್ಚೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಸಹ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ