Prajwal Revanna Case: ಪ್ರಕರಣದ ಸ್ಟೇಟಸ್ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಚರ್ಚೆ
ಅವರಿಬ್ಬರ ವಿರುದ್ಧ ಬಹಳ ಗಂಭೀರವಾದ ಆರೋಪಗಳಿವೆ. ಸುಮಾರು ಒಂದೂವರೆ ಗಂಟೆ ಕಾಲ ನಡೆದ ಮಾತುಕತೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿಮಾಡುವ ಬಗ್ಗೆ ಸಿಬಿಐನಿಂದ ಸ್ಟೇಟಸ್ ರಿಪೋರ್ಟ್ ಬಗ್ಗೆಯೂ ಮುಖ್ಯಮಂತ್ರಿಯವರು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರೆನ್ನಲಾಗಿದೆ.
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ (Alok Mohan), ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ (Sharath Chandra) ಅವರಿಂದ ಮುಖ್ಯಮಂತ್ರಿ ಮಾಹಿತಿ ಪಡೆದರು. ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಹೆಚ್ ಡಿ ಪ್ರಕರಣಗಳು ಹೈ ಪ್ರೊಫೈಲ್ ಆಗಿರುವುದರಿಂದ ಸರ್ಕಾರ ಬಹಳ ಎಚ್ಚರಿಕೆಯಿಂದ ಮುಂದುವರಿಯಬೇಕಾಗುತ್ತದೆ. ಪ್ರಜ್ವಲ್, ರೇವಣ್ಣ ಅವರ ಮಗ ಮತ್ತು ರೇವಣ್ಣ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮಗ ಹಾಗೂ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಲ್ಲದೆ ಪಕ್ಷದ ರಾಜ್ಯಾಧ್ಯಕ್ಷನಾಗಿರುವ ಹೆಚ್ ಡಿ ಕುಮಾರಸ್ವಾಮಿಯವರ ಸಹೋದರ. ರೇವಣ್ಣರ ಇನ್ನೊಬ್ಬ ಮಗ ಸೂರಜ್ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಇದು ಹೈ ಪ್ರೊಫೈಲ್ ಕೇಸ್ ಆಗಿರದೆ ಮತ್ತೇನಾಗಿರಲು ಸಾಧ್ಯ? ಅವರಿಬ್ಬರ ವಿರುದ್ಧ ಬಹಳ ಗಂಭೀರವಾದ ಆರೋಪಗಳಿವೆ. ಸುಮಾರು ಒಂದೂವರೆ ಗಂಟೆ ಕಾಲ ನಡೆದ ಮಾತುಕತೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿಮಾಡುವ ಬಗ್ಗೆ ಸಿಬಿಐನಿಂದ ಸ್ಟೇಟಸ್ ರಿಪೋರ್ಟ್ ಬಗ್ಗೆಯೂ ಮುಖ್ಯಮಂತ್ರಿಯವರು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರೆನ್ನಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮೋದಿ ತಮ್ಮ 10 ವರ್ಷದ ಸಾಧನೆ ಹೇಳಿದ್ರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುವೆ: ಸಿದ್ದರಾಮಯ್ಯ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

