ಲೋಕಸಭಾ ಚುನಾವಣೆಗಾಗಿ ಸೂಕ್ತ ಅಭ್ಯರ್ಥಿಗಳ ತಲಾಷ್, ಸಿದ್ದರಾಮಯ್ಯ ನೇತೃತ್ವದಲ್ಲಿ ಮಂತ್ರಿ, ಶಾಸಕರ ಸಭೆ
ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಅದನ್ನು ಪ್ರತ್ಯೇಕ ಐಡೆಂಟಿಟಿಯಾಗಿ ಪರಿಗಣಿಸಲಾಗದು. ವನ್ ಆನ್ ವನ್ ಹೋರಾಟದ ಕಾರಣ ಸೂಕ್ತ ಅಭ್ಯರ್ಥಿಯ ಆಯ್ಕೆ ಎರಡೂ ಪಕ್ಷಗಳಿಗೆ ತಲೆನೋವಿನ ಸಂಗತಿಯಾಗಿದೆ. ಕಲಬುರಗಿಯಲ್ಲೂ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಡಾ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರು ಸಭೆ ನಡೆಸಿದ್ದಾರೆ.
ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha polls) ಹೆಚ್ಚು ದಿನಗಳೇನೂ ಉಳಿದಿಲ್ಲ, ರಾಜಕೀಯ ಪಕ್ಷಗಳು ತಮ್ಮ ತಮ್ಮ ತಯಾರಿಯಲ್ಲಿ ತೊಡಗಿವೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಫೈಟ್ ಇದೆ. ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ (BJP-JDS alliance) ಮಾಡಿಕೊಂಡಿರುವುದರಿಂದ ಅದನ್ನು ಪ್ರತ್ಯೇಕ ಐಡೆಂಟಿಟಿಯಾಗಿ ಪರಿಗಣಿಸಲಾಗದು. ವನ್ ಆನ್ ವನ್ ಹೋರಾಟದ ಕಾರಣ ಸೂಕ್ತ ಅಭ್ಯರ್ಥಿಯ ಆಯ್ಕೆ ಎರಡೂ ಪಕ್ಷಗಳಿಗೆ ತಲೆನೋವಿನ ಸಂಗತಿಯಾಗಿದೆ. ಇದೇ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನಗರದ ಖಾಸಗಿ ಹೋಟೆಲೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಕಾಂಗ್ರೆಸ್ ಮಂತ್ರಿಗಳು ಮತ್ತು ಶಾಸಕರು ಸಭೆಯೊಂದನ್ನು ನಡೆಸಿದರು. ಸಿದ್ದರಾಮಯ್ಯರನ್ನು ಸಚಿವರಾದ ಕೃಷ್ಣ ಭೈರೇಗೌಡ, ಎನ್ ಚಲುವರಾಯಸ್ವಾಮಿ, ಡಾ ಎಂಸಿ ಸುಧಾಕರ್ ಮೊದಲಾದವರು ಹೋಟೆಲ್ ಬಳಿ ಬರಮಾಡಿಕೊಳ್ಳುವುದನ್ನು ದೃಶ್ಯಗಳಲ್ಲಿ ನೋಡಬಹುದು. ಕಲಬುರಗಿಯಿಂದ ಟಿವಿ9 ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಡಾ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರು ಕಲಬುರಗಿಯಲ್ಲಿ ಸಭೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ