CM Siddaramaiah: ಐದು-ಗ್ಯಾರಂಟಿ ಜಾರಿಗೆ ತರುವ ಹಿನ್ನೆಲೆ ಸಂಬಂಭಪಟ್ಟ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: May 29, 2023 | 2:02 PM

ಜೂನ್ ಒಂದರಂದು ಸಂಪುಟ ಸಭೆಯಲ್ಲಿ ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಆದೇಶ ಹೊರಡಿಸುವ ಸಾಧ್ಯತೆ ಇರುವುದರಿಂದ ಅಂಕಿ-ಅಂಶಗಳ ಮೇಲೆ ಸಿಎಂ ಅಧ್ಯಯನ ನಡೆಸಲಿದ್ದಾರೆ.

ಬೆಂಗಳೂರು: ಚುನಾವಣೆ ಸಮಯದಲ್ಲಿ ಜನರಿಗೆ ನೀಡಿದ 5 ಗ್ಯಾರಂಟಿಗಳನ್ನು (5 Guarantees) ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಾರ್ಯೋನ್ಮುಖರಾದಂತೆ ಕಾಣುತ್ತಿದೆ ಮಾರಾಯ್ರೇ. ಇಂದು ಬೆಳಗ್ಗೆ ಮುಖ್ಯಮಂತ್ರಿಗಳು 5 ಇಲಾಖೆಯ ಅಧಿಕಾರಿಗಳ ಜೊತೆ ಶಕ್ತಿ ಭವನದಲ್ಲಿ (Shakti Bhavan) ಸಭೆ ನಡೆಸಿದರು. ಗ್ಯಾರಂಟಿಗಳ ಜಾರಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಬರುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಲಾಗಿತ್ತು. ಜೂನ್ ಒಂದರಂದು ಸಂಪುಟ ಸಭೆಯಲ್ಲಿ ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಆದೇಶ ಹೊರಡಿಸುವ ಸಾಧ್ಯತೆ ಇರುವುದರಿಂದ ಅಂಕಿ-ಅಂಶಗಳ ಮೇಲೆ ಅವರು ಅಧ್ಯಯನ ನಡೆಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: May 29, 2023 02:02 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.