ಬೆಂಗಳೂರು ದಕ್ಷಿಣ ಅಭ್ಯರ್ಥಿ ಸೌಮ್ಯ ರೆಡ್ಡಿಗಾಗಿ ಸಿಎಂ ಸಿದ್ದರಾಮಯ್ಯ ರವಿವಾರ ತಡರಾತ್ರಿ ರೋಡ್ ಶೋ

|

Updated on: Apr 08, 2024 | 12:52 PM

ರಾಜ್ಯದ ಮುಖ್ಯಮಂತ್ರಿಯಾಗಿ ತಾನು ಜನತೆಗೆ ಮತ್ತೊಮ್ಮೆ ಆಶ್ವಾಸನೆ ನೀಡುತ್ತೇನೆ, ಸರ್ಕಾರದ ಗ್ಯಾರಂಟಿ ಯೋಜನೆಗಳು ಯಾವ ಕಾರಣಕ್ಕೂ ನಿಲ್ಲಲ್ಲ, ಬಿಜೆಪಿ ಮುಖಂಡರು ಹೇಳುವ ಮಾತನ್ನು ನಂಬಬೇಡಿ ಅಂತ ಹೇಳಿದರು. ಸಿದ್ದರಾಮಯ್ಯರ ರೋಡ್ ಶೋ ತಡರಾತ್ರಿಯಲ್ಲಿ ನಡೆದರೂ ಸಾವಿರಾರು ಜನ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಒಬ್ಬ ಮಾಸ್ ಲೀಡರ್ ಅನ್ನೋದು ಗೊತ್ತಿರುವ ವಿಚಾರವೇ. ಅವರು ಹೋದೆಡೆಯೆಲ್ಲ ಜನ ಸೇರುತ್ತಾರೆ. ರಾಜ್ಯ ಕಾಂಗ್ರೆಸ್ (state Congress unit) ಶನಿವಾರದಿಂದ ರಾಜ್ಯದಲ್ಲಿ ಲೋಕಸಭಾ ಚುನಾವಣೆಗಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ರವಿವಾರ ರಾತ್ರಿ ಸಿದ್ದರಾಮಯ್ಯ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ (Sowmya Reddy) ಪರ ಬೊಮ್ಮನಹಳ್ಳಿಯ ಹೊಂಗಸಂದ್ರ ಬಸ್ ನಿಲ್ದಾಣದಿಂದ ಪ್ರಚಾರ ಮತ್ತು ರೋಡ್ ಶೋ ನಡೆಸಿದರು. ತೆರೆದ ವಾಹನದಲ್ಲಿ ಸಿದ್ದರಾಮಯ್ಯ ಮತ್ತು ಸೌಮ್ಯ ರೆಡ್ಡಿ ಅವರೊಂದಿಗೆ ಕೆಲ ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ನೋಡಬಹುದು. ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಅಂತ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿಯಾಗಿ ತಾನು ಜನತೆಗೆ ಮತ್ತೊಮ್ಮೆ ಆಶ್ವಾಸನೆ ನೀಡುತ್ತೇನೆ, ಸರ್ಕಾರದ ಗ್ಯಾರಂಟಿ ಯೋಜನೆಗಳು ಯಾವ ಕಾರಣಕ್ಕೂ ನಿಲ್ಲಲ್ಲ, ಬಿಜೆಪಿ ಮುಖಂಡರು ಹೇಳುವ ಮಾತನ್ನು ನಂಬಬೇಡಿ ಅಂತ ಹೇಳಿದರು. ಸಿದ್ದರಾಮಯ್ಯರ ರೋಡ್ ಶೋ ತಡರಾತ್ರಿಯಲ್ಲಿ ನಡೆದರೂ ಸಾವಿರಾರು ಜನ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೆಣ್ಣುಮಕ್ಕಳ ತುಚ್ಛೀಕರಣವನ್ನ ಸರ್ಕಾರ ಸಹಿಸುವುದಿಲ್ಲ: ಕಿಡಿಗೇಡಿಗಳ ವಿರುದ್ಧ ಕ್ರಮ ಎಂದ ಸಿದ್ದರಾಮಯ್ಯ

Published on: Apr 08, 2024 10:17 AM