ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿದ್ದುಗೆ ‘ಗೋಲ್ಡನ್’ ಗಿಫ್ಟ್: ನಗುನಗುತ್ತಲೇ ಉಂಗುರ ಸ್ವೀಕರಿಸಿದ ಮುಖ್ಯಮಂತ್ರಿ
ಕಲಬುರಗಿಯ ನಾಲವಾರ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀ ತೋಟೇಂದ್ರ ಸ್ವಾಮೀಜಿ ಅವರು ಚಿನ್ನದ ಉಂಗುರ ನೀಡಿ ಗೌರವಿಸಿದರು. ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ದಾಖಲೆಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಶೇಷವಾಗಿ ಅಭಿನಂದಿಸಲಾಯಿತು. ಇದು ಸಿದ್ದರಾಮಯ್ಯ ಅವರ ರಾಜಕೀಯ ಸಾಧನೆಗೆ ಲಭಿಸಿದ ಮನ್ನಣೆ.
ಕಲಬುರಗಿ, ಏ.11 : ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ಜಿಲ್ಲೆಯ ನಾಲವಾರ ಮಠದ ಶ್ರೀಗಳು ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡುವ ಮೂಲಕ ವಿಶೇಷವಾಗಿ ಅಭಿನಂದಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಜಿಲ್ಲೆಯ ಸೂಗೂರು ಕಾರ್ಯಕ್ರಮ ಮುಗಿಸಿ ಮಠಕ್ಕೆ ಆಗಮಿಸಿದ ಸಿಎಂ ಅವರನ್ನು ಮಠದ ಪೀಠಾಧಿಪತಿಗಳಾದ ಶ್ರೀ ತೋಟೇಂದ್ರ ಸ್ವಾಮೀಜಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಶ್ರೀಗಳು ಮುಖ್ಯಮಂತ್ರಿಯವರಿಗೆ ಚಿನ್ನದ ಉಂಗುರವನ್ನು ತೊಡಿಸಿದರು. ಸಿದ್ದರಾಮಯ್ಯ ಅವರು ಇದುವರೆಗೆ ಅತಿ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡಿಸಿರುವ ಐತಿಹಾಸಿಕ ಸಾಧನೆಯನ್ನು ಗುರುತಿಸಿ ಮಠದ ವತಿಯಿಂದ ಈ ವಿಶೇಷ ಉಡುಗೊರೆ ನೀಡಲಾಯಿತು. ಶ್ರೀಗಳು ಪ್ರೀತಿಯಿಂದ ನೀಡಿದ ಈ ‘ಗೋಲ್ಡನ್’ ಉಡುಗೊರೆಯನ್ನು ಮುಖ್ಯಮಂತ್ರಿಗಳು ನಗುನಗುತ್ತಲೇ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
