ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿದ್ದುಗೆ ‘ಗೋಲ್ಡನ್’ ಗಿಫ್ಟ್: ನಗುನಗುತ್ತಲೇ ಉಂಗುರ ಸ್ವೀಕರಿಸಿದ ಮುಖ್ಯಮಂತ್ರಿ

Edited By:

Updated on: Apr 11, 2026 | 8:49 PM

ಕಲಬುರಗಿಯ ನಾಲವಾರ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀ ತೋಟೇಂದ್ರ ಸ್ವಾಮೀಜಿ ಅವರು ಚಿನ್ನದ ಉಂಗುರ ನೀಡಿ ಗೌರವಿಸಿದರು. ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ದಾಖಲೆಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಶೇಷವಾಗಿ ಅಭಿನಂದಿಸಲಾಯಿತು. ಇದು ಸಿದ್ದರಾಮಯ್ಯ ಅವರ ರಾಜಕೀಯ ಸಾಧನೆಗೆ ಲಭಿಸಿದ ಮನ್ನಣೆ.

ಕಲಬುರಗಿ, ಏ.11 : ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ಜಿಲ್ಲೆಯ ನಾಲವಾರ ಮಠದ ಶ್ರೀಗಳು ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡುವ ಮೂಲಕ ವಿಶೇಷವಾಗಿ ಅಭಿನಂದಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಜಿಲ್ಲೆಯ ಸೂಗೂರು ಕಾರ್ಯಕ್ರಮ ಮುಗಿಸಿ ಮಠಕ್ಕೆ ಆಗಮಿಸಿದ ಸಿಎಂ ಅವರನ್ನು ಮಠದ ಪೀಠಾಧಿಪತಿಗಳಾದ ಶ್ರೀ ತೋಟೇಂದ್ರ ಸ್ವಾಮೀಜಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಶ್ರೀಗಳು ಮುಖ್ಯಮಂತ್ರಿಯವರಿಗೆ ಚಿನ್ನದ ಉಂಗುರವನ್ನು ತೊಡಿಸಿದರು. ಸಿದ್ದರಾಮಯ್ಯ ಅವರು ಇದುವರೆಗೆ ಅತಿ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡಿಸಿರುವ ಐತಿಹಾಸಿಕ ಸಾಧನೆಯನ್ನು ಗುರುತಿಸಿ ಮಠದ ವತಿಯಿಂದ ಈ ವಿಶೇಷ ಉಡುಗೊರೆ ನೀಡಲಾಯಿತು. ಶ್ರೀಗಳು ಪ್ರೀತಿಯಿಂದ ನೀಡಿದ ಈ ‘ಗೋಲ್ಡನ್’ ಉಡುಗೊರೆಯನ್ನು ಮುಖ್ಯಮಂತ್ರಿಗಳು ನಗುನಗುತ್ತಲೇ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More