ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು. ದೊಡ್ಡನಾಗರದ 9 ನೇ ಪಂಪ್ ಹೌಸ್ನಲ್ಲಿ ಉದ್ಘಾಟನೆ ನೆರವೇರಿತು. ಯೋಜನೆಗೆ ಸಿಎಂ ಚಾಲನೆ ನೀಡಿದ ವಿಡಿಯೋ ಇಲ್ಲಿದೆ.
ಹಾಸನ, ಸೆಪ್ಟೆಂಬರ್ 6: ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು. ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಬಳಿ ಯೋಜನೆ ಉದ್ಘಾಟನೆ ಮಾಡಲಾಯಿತು. ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದ ಸಿಎಂ, ದೊಡ್ಡನಾಗರದ 9ನೇ ಪಂಪ್ ಹೌಸ್ನಲ್ಲಿ ಕಂಪ್ಯೂಟರ್ ಮೂಲಕ ಮೋಟರ್ ಆನ್ ಮಾಡಿದರು. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಸಿಎಂಗೆ ಸಾಥ್ ನೀಡಿದರು.
ಉದ್ಘಾಟನೆಗೂ ಮುನ್ನ ಸಿಎಂ ಪೂಜೆ ಸಲ್ಲಿಸಿದರು. ಇಂದಿನಿಂದ ಎತ್ತಿನಹೊಳೆ ಕಾಲುವೆಯಲ್ಲಿ ಪಶ್ಚಿಮಘಟ್ಟದ ನೀರು ಹರಿಯಲಿದೆ. ಬಯಲುಸೀಮೆಯತ್ತ ಮಲೆನಾಡ ನೀರು ಹರಿಯಲಿದೆ. ಇದರಿಂದಾಗಿ ಬಯಲು ಸೀಮೆಭಾಗದ ಜನರಲ್ಲಿ ನಿರೀಕ್ಷೆಗಳು ಗರಿಗೆದರಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ