Siddaramaiah: ಮಹಾರಾಷ್ಟ್ರದ ಕಾಂಗ್ರೆಸ್ ಮಹಾಸಮಾವೇಶದಲ್ಲಿ CM ಸಿದ್ದರಾಮಯ್ಯ ಭಾಗಿ, ಕಿಕ್ಕಿರಿದು ತುಂಬಿದ ಜನ

|

Updated on: Jun 25, 2023 | 2:48 PM

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಹಾಗೂ ಸಹಸ್ರಾರು ಜನರನ್ನು ಉದ್ದೇಶಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದು ಸಾಂಗ್ಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಮಹಾಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಉದ್ಘಾಟಿಸಿ, ಆಗಮಿಸಿದ್ದ ಸಹಸ್ರಾರು ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಸಮಾವೇಶದಲ್ಲಿ ಭಾಗಿಯಾಗಿದ್ದ ಸಾವಿರಾರು ಜನ ಸಿದ್ದರಾಮಯ್ಯನವರನ್ನು ನೋಡಿ ಶಿಳ್ಳೆ, ಚಪ್ಪಾಳೆ ಹೊಡೆದು ಸಂತಸ ಹೊರ ಹಾಕಿದ್ರು.