ಚಿಕ್ಕಮಗಳೂರು: ಎನ್​ಆರ್ ಪುರದಲ್ಲಿ ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Edited By:

Updated on: Apr 13, 2026 | 11:51 AM

ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಹಂದೂರಿನಲ್ಲಿ 34 ಕೋಟಿ ರೂ. ವೆಚ್ಚದಲ್ಲ ತಮ್ಮದೇ ಹೆಸರಿನಲ್ಲಿ (ಸಿದ್ದರಾಮಯ್ಯ ಸೇತುವೆ) ನಿರ್ಮಾಣವಾದ ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಅಲ್ಲದೆ, ತಾಲೂಕಿನಾದ್ಯಂತ ನಡೆಯಲಿರುವ 100 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು.

ಚಿಕ್ಕಮಗಳೂರು, ಏಪ್ರಿಲ್ 13: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂದೂರು ಬಳಿ ನಿರ್ಮಿಸಲಾಗಿರುವ ಬೃಹತ್ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದಕ್ಕೆ ‘ಸಿದ್ದರಾಮಯ್ಯ ಸೇತುವೆ’ ಎಂದು ನಾಮಕರಣ ಮಾಡಲಾಗಿದೆ.

ಉದ್ಘಾಟನೆ ಬಳಿಕ ಸೇತುವೆ ವೀಕ್ಷಿಸಿದ ಸಿಎಂ, ನಂತರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಬಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More