ಬೀದರ್-ಬೆಂಗಳೂರು ವಿಮಾನಯಾನ ಪುನರಾರಂಭಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಮಾನಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅದೇ ಕಾರ್ಯಕ್ರಮದಲ್ಲಿ ಕೇಕ್ ಕಟ್ ಮಾಡಿದರು. ಕೇಕ್ ಕಟ್ ಮಾಡಿದ ಬಳಿಕ ಮೊದಲ ಪೀಸನ್ನು ನೀಡಿದ್ದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ. ನಂತರದ ಪೀಸನ್ನು ಬೀದರ್ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆಗೆ ನೀಡಿದರು. ಖಂಡ್ರೆ ಸಹ ಕೇಕ್ನ ಒಂದು ಪೀಸನ್ನು ಶಿವಕುಮಾರ್ ಅವರಿಗೆ ನೀಡಿದರು.
ಬೀದರ್, ಏಪ್ರಿಲ್ 16: ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ (Bidar-Bengaluru flight services) ಇಂದಿನಿಂದ ಆರಂಭಗೊಂಡಿದೆ. ವಿಮಾನಯಾನಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ವಿತರಿಸಿದರು. ನಮ್ಮ ಬೀದರ್ ವರದಿಗಾರ ನೀಡುವ ಮಾಹಿತಿ ಪ್ರಕಾರ ಉಡಾನ್ ಯೋಜನೆ ಅಡಿ ನೀಡುತ್ತಿದ್ದ ರಿಯಾಯಿತಿಯನ್ನು ನಿಲ್ಲಿಸಿದ್ದ ಕಾರಣ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆ ರಿಯಾಯಿತಿಯನ್ನು ತಾನೇ ನೀಡುವುದಾಗಿ ರಾಜ್ಯ ಸರ್ಕಾರ ಸ್ಟಾರ್ ಏರ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದರಿಂದ ವಿಮಾನಯಾನ ಪುನರಾರಂಭಗೊಂಡಿದೆ.
ಇದನ್ನೂ ಓದಿ: ಇದು ಕೇವಲ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ, ಯಾರಿಗೂ ಅನ್ಯಾಯವಾಗಲು ಬಿಡಲ್ಲ: ಸಿದ್ದರಾಮಯ್ಯ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ