ಬೀದರ್-ಬೆಂಗಳೂರು ವಿಮಾನಯಾನ ಪುನರಾರಂಭಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 16, 2025 | 10:41 PM

ವಿಮಾನಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅದೇ ಕಾರ್ಯಕ್ರಮದಲ್ಲಿ ಕೇಕ್ ಕಟ್ ಮಾಡಿದರು. ಕೇಕ್ ಕಟ್ ಮಾಡಿದ ಬಳಿಕ ಮೊದಲ ಪೀಸನ್ನು ನೀಡಿದ್ದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ. ನಂತರದ ಪೀಸನ್ನು ಬೀದರ್ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆಗೆ ನೀಡಿದರು. ಖಂಡ್ರೆ ಸಹ ಕೇಕ್​ನ ಒಂದು ಪೀಸನ್ನು ಶಿವಕುಮಾರ್ ಅವರಿಗೆ ನೀಡಿದರು.

ಬೀದರ್, ಏಪ್ರಿಲ್ 16: ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಡುವೆ ನಾಗರಿಕ  ವಿಮಾನಯಾನ ಸೇವೆ (Bidar-Bengaluru flight services) ಇಂದಿನಿಂದ ಆರಂಭಗೊಂಡಿದೆ. ವಿಮಾನಯಾನಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ವಿತರಿಸಿದರು. ನಮ್ಮ ಬೀದರ್ ವರದಿಗಾರ ನೀಡುವ ಮಾಹಿತಿ ಪ್ರಕಾರ ಉಡಾನ್ ಯೋಜನೆ ಅಡಿ ನೀಡುತ್ತಿದ್ದ ರಿಯಾಯಿತಿಯನ್ನು ನಿಲ್ಲಿಸಿದ್ದ ಕಾರಣ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆ ರಿಯಾಯಿತಿಯನ್ನು ತಾನೇ ನೀಡುವುದಾಗಿ ರಾಜ್ಯ ಸರ್ಕಾರ ಸ್ಟಾರ್​ ಏರ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದರಿಂದ ವಿಮಾನಯಾನ ಪುನರಾರಂಭಗೊಂಡಿದೆ.

ಇದನ್ನೂ ಓದಿ: ಇದು ಕೇವಲ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ, ಯಾರಿಗೂ ಅನ್ಯಾಯವಾಗಲು ಬಿಡಲ್ಲ: ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.