ಮೈಸೂರು ದಸರಾ: ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆ ನಡೆದ ಜಂಬೂಸವಾರಿ ವೇಳೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾದ ಚಾಮುಂಡೇಶ್ವರಿಯನ್ನ ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ. 6ನೇ ಬಾರಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗಿದ್ದು, ಕುಮ್ಕಿ ಆನೆಗಳಾದ ಕಾವೇರಿ, ರೂಪಾ ಸಾಥ್ ನೀಡಿವೆ.
ಮೈಸೂರು, ಅಕ್ಟೋಬರ್ 02: ವಿಶ್ವವಿಖ್ಯಾತ, ನಾಡಹಬ್ಬ ಮೈಸೂರು ದಸರಾ (Dasara) ಮಹೋತ್ಸವ ಹಿನ್ನಲೆ ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. 6ನೇ ಬಾರಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗಿದ್ದು, ಮಾವುತ ವಸಂತ ಆನೆಯನ್ನ ಮುನ್ನಡೆಸಿದ್ದಾರೆ. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಕಾವೇರಿ, ರೂಪಾ ಸಾಥ್ ನೀಡಿವೆ. ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ವೇಳೆ ಡಿಸಿಎಂ ಡಿಕೆಶಿ, ಸಂಸದ ಮತ್ತು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ, ಕನ್ನಡ & ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಶಾಸಕ ತನ್ವೀರ್ ಸೇಠ್, ಡಿಸಿ ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
