ಮೈಸೂರು ದಸರಾ: ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Edited By:

Updated on: Oct 02, 2025 | 5:07 PM

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆ ನಡೆದ ಜಂಬೂಸವಾರಿ ವೇಳೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾದ ಚಾಮುಂಡೇಶ್ವರಿಯನ್ನ ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ. 6ನೇ ಬಾರಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್​ ಅಭಿಮನ್ಯು ಸಾಗಿದ್ದು, ಕುಮ್ಕಿ ಆನೆಗಳಾದ ಕಾವೇರಿ, ರೂಪಾ ಸಾಥ್​ ನೀಡಿವೆ.

ಮೈಸೂರು, ಅಕ್ಟೋಬರ್​ 02: ವಿಶ್ವವಿಖ್ಯಾತ, ನಾಡಹಬ್ಬ ಮೈಸೂರು ದಸರಾ (Dasara) ಮಹೋತ್ಸವ ಹಿನ್ನಲೆ ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. 6ನೇ ಬಾರಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್​ ಅಭಿಮನ್ಯು ಸಾಗಿದ್ದು, ಮಾವುತ ವಸಂತ ಆನೆಯನ್ನ ಮುನ್ನಡೆಸಿದ್ದಾರೆ. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಕಾವೇರಿ, ರೂಪಾ ಸಾಥ್​ ನೀಡಿವೆ. ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ವೇಳೆ ಡಿಸಿಎಂ ಡಿಕೆಶಿ, ಸಂಸದ ಮತ್ತು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ, ಕನ್ನಡ & ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಶಾಸಕ ತನ್ವೀರ್ ಸೇಠ್​, ಡಿಸಿ ಲಕ್ಷ್ಮೀಕಾಂತ​ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 02, 2025 05:03 PM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More