ಮೈಸೂರಿನ ಕಿದ್ವಾಯಿ ಆಸ್ಪತ್ರೆಯ ಶಂಕು ಸ್ಥಾಪನೆಯಲ್ಲಿ ಶೂ ಧರಿಸಿಯೇ ಸಿಎಂ ಭೂಮಿ ಪೂಜೆ; ಇಲ್ಲಿದೆ ವಿಡಿಯೋ
ಬರೊಬ್ಬರಿ 49 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೈಸೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ (Kidwai Cancer Hospital) ಯ ಶಂಕುಸ್ಥಾಪನೆ ಇಂದು ನೆರವೇರಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ(Siddaramaiah)ನವರು ಕಳಸದ ಬಳಿ ಶೂ ಧರಿಸಿಯೇ ಭೂಮಿ ಪೂಜೆ ಮಾಡಿದ್ದಾರೆ.
ಮೈಸೂರು, ಡಿ.22: ಬರೊಬ್ಬರಿ 49 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೈಸೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ (Kidwai Cancer Hospital) ಯ ಶಂಕುಸ್ಥಾಪನೆ ಇಂದು ನೆರವೇರಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ(Siddaramaiah)ನವರು ಕಳಸದ ಬಳಿ ಶೂ ಧರಿಸಿಯೇ ಭೂಮಿ ಪೂಜೆ ಮಾಡಿದ್ದಾರೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ಕೂಡ ಸೂ ಧರಿಸಿಯೇ ಭೂಮಿ ಪೂಜೆ ನೆರವೇರಿಸಿದರು. ಇದು 350 ಹಾಸಿಗೆ ಸಾಮರ್ಥ್ಯವುಳ್ಳ ಕ್ಯಾನ್ಸರ್ ಆಸ್ಪತ್ರೆ ಆಗಿದೆ. ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ಕೆ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ರವಿಶಂಕರ್, ವಿಧಾನಪರಿಷತ್ ಸದಸ್ಯರಾದ ಡಾ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಮರಿತಿಬ್ಬೆಗೌಡ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ. ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಡೀನ್ ಡಾ.ಅಶೋಕ್, ಮೈಸೂರು ಮೆಡಿಕಲ್ ಕಾಲೇಜು ಡೀನ್ ಡಾ ದಾಕ್ಷಾಯಿಣಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ