ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಸುಳ್ಳು ರಾಮಯ್ಯ ಅನ್ನೋದನ್ನು ಸಾಬೀತು ಮಾಡುತ್ತಿದ್ದಾರೆ: ಸಿಟಿ ರವಿ
ನಿರುದ್ಯೋಗ ಭತ್ಯೆಯ ಗ್ಯಾರಂಟಿ ಘೋಷಿಸುವಾಗ ಕೇವಲ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಾಸಾಗುವ ವಿದ್ಯಾರ್ಥಿಗಳಿಗೆ ಮಾತ್ರ ಹೇಳಿರಲಿಲ್ಲ ಎಂದು ರವಿ ಹೇಳಿದರು.
ಚಿಕ್ಕಮಗಳೂರು: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಶಾಸಕ ಸಿಟಿ ರವಿ (CT Ravi) ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (Siddaramaiah) ಸುಳ್ಳು ರಾಮಯ್ಯ ಎಂದು ಟೀಕಿಸಿದರು. ಸಿದ್ದರಾಮಯ್ಯ ಘೋಷಿಸಿದ ಎಲ್ಲ ಗ್ಯಾರಂಟಿಗಲ್ಲಿ ಸುಳ್ಳಿನ ಅಂಶ ಅಡಗಿದೆ ಎಂದು ಹೇಳಿದ ರವಿ, ಅನ್ನಭಾಗ್ಯ ಯೋಜನೆಗೆ (Anna Bhagya scheme) ಅಕ್ಕಿ ಹೊಂದಿಸಲಾಗದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಅನ್ನಭಾಗ್ಯ ಯೋಜನೆಯನ್ನು ಘೋಷಿಸುವಾಗ ಸಿದ್ದರಾಮಯ್ಯ ಕೇಂದ್ರ ಸರ್ಕಾರದಿಂದ ಅಕ್ಕಿ ಪಡೆಯುತ್ತೇವೆ ಅಂತ ಹೇಳಿರಲಿಲ್ಲ. ಹಾಗೆಯೇ ವಿದ್ಯಾವಂತ ಪದವೀಧರರಿಗೆ ನಿರುದ್ಯೋಗ ಭತ್ಯೆಯ ಗ್ಯಾರಂಟಿ ಘೋಷಿಸುವಾಗ ಕೇವಲ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಾಸಾಗುವ ವಿದ್ಯಾರ್ಥಿಗಳಿಗೆ ಮಾತ್ರ ಹೇಳಿರಲಿಲ್ಲ, ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳಲ್ಲೂ ಹಲವಾರು ತಾರತಮ್ಯಗಳು ಎಂದು ಸಿಟಿ ರವಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
