ವಿಪಕ್ಷಗಳ ಆರೋಪಕ್ಕೆ ಸಿಎಂ ಟಕ್ಕರ್​: ಬಿಜೆಪಿಗೆ ಸಿದ್ದರಾಮಯ್ಯ ಸವಾಲ್​

Updated By: ಪ್ರಸನ್ನ ಹೆಗಡೆ

Updated on: Oct 06, 2025 | 7:02 PM

ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ವಿರುದ್ಧ ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತುಹೋಗಿವೆ ಎಂಬ ಆರೋಪಕ್ಕೆ ಕೌಂಟರ್​ ಕೊಟ್ಟ ಮುಖ್ಯಮಂತ್ರಿಗಳು, ಚರ್ಚೆಗೆ ಬರಲಿ. ನಾನು ಲೆಕ್ಕ ಕೊಡಲು ತಯಾರಿದ್ದೇನೆ ಎಂದು ಸವಾಲು ಹಾಕಿದ್ದಾರೆ.

ಕೊಪ್ಪಳ, ಅಕ್ಟೋಬರ್​ 06: ರಾಜ್ಯ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದರೂ ವಿಪಕ್ಷಗಳು ನಮ್ಮ ಮೇಲೆ ಆರೋಪ ಮಾಡ್ತಿವೆ. ಗ್ಯಾರಂಟಿಗಳಿಂದ ಸರ್ಕಾರದ ಬಳಿ ದುಡ್ಡಿಲ್ಲದ ಕಾರಣ ಅಭಿವೃದ್ಧಿ ಕೆಲಸಗಳು ನಿಂತೋಗಿವೆ ಎಂದು ಆರೋಪಿಸುತ್ತಾರೆ. ಸರ್ಕಾರದ ಬಳಿ ದುಡ್ಡು ಇಲ್ಲದಿದ್ದರೆ ಕೊಪ್ಪಳದಲ್ಲಿಯೇ 2 ಸಾವಿರ ಕೋಟಿ ಮೌಲ್ಯದ ಅಭಿವೃದ್ಧಿ ಕೆಲಸಗಳನ್ನ ಮಾಡಲು ಆಗ್ತಿತ್ತಾ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷ ಕೋಟಿ ಕೊಟ್ಟಿದ್ದು, ಬಿಜೆಪಿಯವರು ಚರ್ಚೆಗೆ ಬರಲಿ. ನಾನು ಲೆಕ್ಕ ಕೊಡಲು ತಯಾರಿದ್ದೇನೆ. ನುಡಿದಂತೆ ನಡೆದ ಸರ್ಕಾರ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್​ ಸರ್ಕಾರ ಎಂದು ಸಿಎಂ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.