ಲಕ್ಷ ವೃಕ್ಷ ಯೋಜನೆಗೆ ಸಿಎಂ ಚಾಲನೆ: ಐದು ಕೋಟಿ ಗಿಡ ಬೆಳೆಸುವ ಗುರಿ ಎಂದ ಸಿದ್ದರಾಮಯ್ಯ
ಮೈಸೂರಿನಲ್ಲಿ ಆಯೋಜಿಸಿದ್ದ "ಲಕ್ಷ ವೃಕ್ಷ ಯೋಜನಾ" ಕಾರ್ಯಕ್ರಮವನ್ನು ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮನುಷ್ಯನ ದುರಾಸೆಯಿಂದ ಪ್ರಕೃತಿ ನಾಶವಾಗುತ್ತಿದೆ. ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಕನಿಷ್ಠ ಶೇ. 30 ಇರಬೇಕಿತ್ತು. ಆದರೆ ಸರಾಸರಿ ಶೇ. 19 ಇದೆ. ಈ ವರ್ಷ ರಾಜ್ಯದಲ್ಲಿ ಐದು ಕೋಟಿ ಗಿಡ ಬೆಳೆಸುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ದಾರೆ.
ಮೈಸೂರು, ಜೂನ್ 15: ನಗರದ ರಾಜೀವ್ ಸ್ನೇಹ ಬಳಗ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಲಕ್ಷ ವೃಕ್ಷ ಯೋಜನಾ” ಕಾರ್ಯಕ್ರಮವನ್ನು ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಉದ್ಘಾಟಿಸಿದರು. ಸುತ್ತೂರು ವೀರಸಿಂಹಾಸನ ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸಿ. ಮಹದೇವಪ್ಪ, ಕೆ.ವೆಂಕಟೇಶ್, ಈಶ್ವರ್ ಖಂಡ್ರೆ ಹಾಗೂ ಶಾಸಕರಾದ ತನ್ವೀರ್ ಸೇಠ್ ಮತ್ತು ಮುಖಂಡರಾದ ಪಿ.ರಾಜೀವ್ ಸೇರಿ ಹಲವರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವರ್ಷ ರಾಜ್ಯದಲ್ಲಿ ಐದು ಕೋಟಿ ಗಿಡ ಬೆಳೆಸುವ ಗುರಿ ಹೊಂದಿದ್ದೇವೆ. ಮನುಷ್ಯನ ದುರಾಸೆಯಿಂದ ಪ್ರಕೃತಿ ನಾಶವಾಗುತ್ತಿದೆ. ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಸರಾಸರಿ ಶೇ. 19 ಇದೆ. ಇದು ಕನಿಷ್ಠ ಶೇ. 30 ಇರಬೇಕಿತ್ತು. ಪ್ರಕೃತಿಯನ್ನು ಪ್ರೀತಿಸಿ, ಗೌರವಿಸಿ, ಸಂರಕ್ಷಿಸಿ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.