ಕೃಷ್ಣಾನದಿಗೆ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲು ಆಲಮಟ್ಟಿ ಜಲಾಶಯಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಸಚಿವರು ಬೆಂಗಳೂರಿನಿಂದ ವಿಶೇಷ ವಿಮಾನವೊಂದರಲ್ಲಿ ಹೊರಟು ಬಳ್ಳಾರಿ ಜಿಲ್ಲೆಯ ತೋರಣ್ ಗಲ್ ನಲ್ಲಿರುವ ಜಿಂದಾಲ್ ಸಂಸ್ಥೆಯ ಏರ್ ಸ್ಟ್ರಿಪ್ ನಲ್ಲಿ ಲ್ಯಾಂಡ್ ಆಗಲಿದ್ದಾರೆ. ಅಲ್ಲಿಂದ ಚಾಪರ್ ಒಂದರ ಮೂಲಕ ಆಲಮಟ್ಟಿಗೆ ತೆರಳಲಿದ್ದಾರೆ. ಬಾಗಿನ ಅರ್ಪಿಸಿಸದ ಬಳಿಕ ಮುಖ್ಯಮಂತ್ರಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಕೃಷ್ಣಾನದಿಯಲ್ಲಿ (River Krishna) ಗಂಗಾಪೂಜೆ ನಡೆಸಿ ಬಾಗಿನ ಅರ್ಪಿಸಲು ಆಲಮಟ್ಟಿ ಜಲಾಶಯದ ಕಡೆ ಪ್ರಯಾಣ ಬೆಳೆಸಿದರು. ಅವರೊಂದಿಗೆ ತೆರಳಲು, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ (MB Patil) ಮತ್ತು ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಆಹ್ಮದ್ ಖಾನ್ (BZ Zameer Ahmed Khan) ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸುತ್ತಿರುವುದನ್ನು ಇಲ್ಲಿ ನೋಡಬಹುದು. ಮುಖ್ಯಮಂತ್ರಿ ಕಚೇರಿಯಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಮತ್ತು ಸಚಿವರು ಬೆಂಗಳೂರಿನಿಂದ ವಿಶೇಷ ವಿಮಾನವೊಂದರಲ್ಲಿ ಹೊರಟು ಬಳ್ಳಾರಿ ಜಿಲ್ಲೆಯ ತೋರಣ್ ಗಲ್ ನಲ್ಲಿರುವ ಜಿಂದಾಲ್ ಸಂಸ್ಥೆಯ ಏರ್ ಸ್ಟ್ರಿಪ್ ನಲ್ಲಿ ಲ್ಯಾಂಡ್ ಆಗಲಿದ್ದಾರೆ. ಅಲ್ಲಿಂದ ಚಾಪರ್ ಒಂದರ ಮೂಲಕ ಆಲಮಟ್ಟಿಗೆ ತೆರಳಲಿದ್ದಾರೆ. ಬಾಗಿನ ಅರ್ಪಿಸಿಸದ ಬಳಿಕ ಮುಖ್ಯಮಂತ್ರಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ