Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಸಿಸಿ ಹೈಕಮಾಂಡ್ ಮೀಟಿಂಗ್ ಹಿನ್ನೆಲೆ ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ

ಎಐಸಿಸಿ ಹೈಕಮಾಂಡ್ ಮೀಟಿಂಗ್ ಹಿನ್ನೆಲೆ ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ

ಸಾಧು ಶ್ರೀನಾಥ್​
|

Updated on: Aug 02, 2023 | 1:17 PM

ಎಐಸಿಸಿ ಹೈಕಮಾಂಡ್ ಮೀಟಿಂಗ್: ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 20 ಸ್ಥಾನಗಳನ್ನು ಗೆಲ್ಲುವ ಲೆಕ್ಕಚಾರ ಮಾಡಿದೆ. ಈ ಕುರಿತ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಲಿದೆ. ಬಿಜೆಪಿ, ಜೆಡಿಎಸ್ ಮೈತ್ರಿಯಾದರೆ ಅದರಿಂದ ಉಂಟಾಗಬಹುದಾದ ಪರಿಣಾಮ, 20 ಸ್ಥಾನಗಳ ಗೆಲುವಿಗೆ ಮಾಡಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ.

ದೆಹಲಿಯಲ್ಲಿಂದು ಕಾಂಗ್ರೆಸ್​ ಹೈಕಮಾಂಡ್​ ಸಭೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಹೈಕಮಾಂಡ್​​ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್​​​​, ಸಚಿವರಾದ ಕೆ.ಹೆಚ್​.ಮುನಿಯಪ್ಪ, ಆರ್​​​.ಬಿ.ತಿಮ್ಮಾಪುರ, ಚಲುವರಾಯಸ್ವಾಮಿ, ಎಂಎಲ್​ಸಿ ಬಿ.ಕೆ. ಹರಿಪ್ರಸಾದ್​​​​​​ ಈಗಾಗಲೇ ದೆಹಲಿಯಲ್ಲಿದ್ದಾರೆ. ದೆಹಲಿಯಲ್ಲಿಂದು ರಾಜ್ಯ ಕಾಂಗ್ರೆಸ್ ಜತೆ​ ಹೈಕಮಾಂಡ್​​ ಸಭೆ ಏರ್ಪಾಟಾಗಿದೆ. ಎಐಸಿಸಿ ಅಧ್ಯಕ್ಷ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಹಿನ್ನೆಲೆ ಸಭೆ (Congress high command meeting) ನಡೆಯಲಿದೆ. ಕಾಂಗ್ರೆಸ್ ಹೈಕಮಾಂಡ್ ಇಂದು ಬುಧವಾರ 2 ಹಂತದಲ್ಲಿ ಸಭೆ ನಡೆಸಲಿದೆ.​​​​​ ಇಂದಿನ ಸಭೆಗೆ ರಾಜ್ಯದ ಒಟ್ಟು 37 ಕಾಂಗ್ರೆಸ್​​ ನಾಯಕರಿಗೆ ಆಹ್ವಾನ ನೀಡಲಾಗಿದೆ. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಪ್ರಮುಖರು ಭಾಗಿಯಾಗಲಿದ್ದಾರೆ.

ಇಂದು ದೆಹಲಿಯಲ್ಲಿ ನಡೆಯಲಿದೆ ಹೈಲೆವೆಲ್ ಮೀಟಿಂಗ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜುಗೊಳ್ಳತ್ತಿದೆ. ಕರ್ನಾಟಕದಲ್ಲಿ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಹೈಕಮಾಂಡ್ ಟಾರ್ಗೆಟ್ ಫಿಕ್ಸ್ ಮಾಡಿದೆ. ಹೀಗಾಗಿ ಇಂದು ರಾಜ್ಯ ನಾಯಕರ ಜೊತೆ ಹೈಕಮಾಂಡ್ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ. ಜೊತೆಗೆ ರಾಜ್ಯ ನಾಯಕರ ನಡುವಿನ ಅಸಮಧಾನದ ಬೇಗುದಿಗೂ ಹೈಕಮಾಂಡ್ ಮದ್ದು ಅರೆಯಲಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳಿಗೆ ಮಣ್ಣು ಮುಕ್ಕಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್ , ಲೋಕಸಭಾ ಚುನಾವಣೆ ಗೆಲ್ಲುವತ್ತ ಚಿತ್ತ ಹರಿಸಿದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಹೈಕಮಾಂಡ್ ಟಾರ್ಗೆಟ್ ಫಿಕ್ಸ್ ಮಾಡಿದೆ. ಹೀಗಾಗಿ ಇಂದು ರಾಜ್ಯ ನಾಯಕರ ಜೊತೆ ಹೈಕಮಾಂಡ್ ನಾಯಕರು ಹೈಲೆವೆಲ್ ಮೀಟಿಂಗ್ ನಡೆಸಲಿದ್ದಾರೆ.

2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ವರಿಷ್ಠರ ಕರೆ ಹಿನ್ನಲೆ ರಾಜ್ಯದ ಐವತ್ತಕ್ಕೂ ಅಧಿಕ ನಾಯಕರು ದೆಹಲಿಗೆ ಆಗಮಿಸಿದ್ದು ಇಂದು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಎರಡು ಹಂತದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಭಾಗಿಯಾಗಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ