ಅತಿಥಿಗಳನ್ನು ಸ್ವಾಗತಿಸಿದ ಎಂಬಿ ಪಾಟೀಲ್, ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಅಂದಾಗ ಸಿದ್ದರಾಮಯ್ಯ ಮುಖ ನೋಡಿದ್ದು ಯಾಕೋ?

ಅರುಣ್​ ಕುಮಾರ್​ ಬೆಳ್ಳಿ

Updated on: Aug 04, 2023 | 4:18 PM

ತಮ್ಮ ಇಂಗ್ಲಿಷ್ ಭಾಷಣದಲ್ಲಿ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವಾಗತ ಅಂದಾಗ ಮುಖ್ಯಮಂತ್ರಿ ಕೈಜೋಡಿಸಿ ಸಭಿಕರಿಗೆ ನಮಸ್ಕರಿಸುತ್ತಾರೆ.

ಬೆಂಗಳೂರು: ನಗರದಲ್ಲಿಂದು ಸಿಎಸ್ ಆರ್ ಶಿಕ್ಷಣ ಸಮಾವೇಶ-2023 (CSR Education Conclave-2023) ಅಯೋಜನೆಗೊಂಡಿತು. ಕಾರ್ಪೋರೇಶನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಕಾರ್ಯಕ್ರಮವನ್ನು ಆಯೋಜಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಚುರುಕಿನಿಂದ ಓಡಾಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಗೃಹ ಸಚಿವ ಜಿ ಪರಮೇಶ್ವರ್, ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ (MB Patil) ಹಾಗೂ ಇನ್ನೂ ಕೆಲ ಗಣ್ಯರು ಭಾಗವಹಿಸಿದ್ದರು. ಅತಿಥಿಗಳನ್ನು ಸ್ವಾಗತಿಸುವ ಜವಾಬ್ದಾರಿ ಎಂಬಿ ಪಾಟೀಲ್ ಗೆ ವಹಿಸಲಾಗಿತ್ತು. ತಮ್ಮ ಇಂಗ್ಲಿಷ್ ಭಾಷಣದಲ್ಲಿ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವಾಗತ ಅಂದಾಗ ಮುಖ್ಯಮಂತ್ರಿ ಕೈಜೋಡಿಸಿ ಸಭಿಕರಿಗೆ ನಮಸ್ಕರಿಸುತ್ತಾರೆ. ಶಿವಕುಮಾರ್ ಹೆಸರು ಹೆಸರು ಹೇಳಿ ಸ್ವಾಗತಿಸುವಾಗ ಪಾಟೀಲ್, ಡೈನಮಿಕ್ ಲೀಡರ್ (dynamic leader) ಎಂಬ ನಾಮ ವಿಶೇಷಣ ಸೇರಿಸಿದರು. ಅವರು ಹಾಗೆ ಹೇಳಿದ ಕೂಡಲೇ ಸಿದ್ದರಾಮಯ್ಯ ತಮ್ಮ ಆಪ್ತನ ಕಡೆ ತಿರುಗಿ ಮುಖ ನೋಡಿದರು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.