Popularity quotient: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲೆಲ್ಲ ಜನಪ್ರಿಯರಾಗಿದ್ದರೆ, ಮೈಸೂರು ಭಾಗದಲ್ಲಿ ಯತೀಂದ್ರ ಅಪ್ಪನಿಗಿಂತ ಹೆಚ್ಚು ಪಾಪ್ಯುಲರ್!

ಅರುಣ್​ ಕುಮಾರ್​ ಬೆಳ್ಳಿ

Updated on: Jun 10, 2023 | 2:08 PM

ಸಿದ್ದರಾಮಯ್ಯ ಮತ್ತು ಯತೀಂದ್ರ ಇಂದು ಹೆಲಿಕಾಪ್ಟ್ಟರ್ ನಲ್ಲಿ ವರುಣಾಗೆ ಆಗಮಿಸಿದಾದ ಸಹಜವಾಗೇ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿಗಳನ್ನು ಸುತ್ತುವರೆಯುತ್ತಾರೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕರ್ನಾಟಕ ಅತ್ಯಂತ ಜನಪ್ರಿಯ ಮತ್ತು ಮಾಸ್ ಲೀಡರ್ (mass leader) ಆಗಿರಬಹುದು. ಆದರೆ ಒಂದು ಮಾತಂತೂ ಸತ್ಯ, ಹಳೆ ಮೈಸೂರು ಭಾಗದಲ್ಲಿ ಅವರ ಮಗ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯನೇ (Yatindra Siddaramaiah) ಹೆಚ್ಚು ಜನಪ್ರಿಯ ಅಂತ ಹೇಳಿದರೆ ಉತ್ಪ್ರೇಕ್ಷೆ ಅನಿಸದು. ಅದಕ್ಕೆ ಜ್ವಲಂತ ಉದಾಹರಣೆ ಇಲ್ಲಿದೆ. ಸಿದ್ದರಾಮಯ್ಯ ಮತ್ತು ಯತೀಂದ್ರ ಇಂದು ಹೆಲಿಕಾಪ್ಟರ್​​ ನಲ್ಲಿ ವರುಣಾಗೆ ಆಗಮಿಸಿದಾದ ಸಹಜವಾಗೇ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿಗಳನ್ನು ಸುತ್ತುವರೆಯುತ್ತಾರೆ. ಆದರೆ ಮಿಕ್ಕಿದ ಜನ, ಸ್ಥಳೀಯರು, ಚಿಕ್ಕಪುಟ್ಟ ಪುಢಾರಿಗಳು ಯತೀಂದ್ರರಲ್ಲಿಗೆ ಓಡಿಬರುತ್ತಾರೆ. ವಿಡಿಯೋದಲ್ಲಿ ನಿಮಗದು ಸ್ಪಷ್ಟವಾಗಿ ಕಾಣುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.