ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ರನ್ನು ಭೇಟಿಯಾದ ಸಿದ್ದರಾಮಯ್ಯ
ರಾಜ್ಯ ಸರ್ಕಾರದ ಕಾರ್ಯವೈಖರಿ ಮತ್ತು ಪಕ್ಷದ ಶಾಸಕರು ಸರ್ಕಾರದ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುತ್ತಿರುವುದು ಎಐಸಿಸಿಗೆ ತೀವ್ರ ಅಸಮಾಧಾನವನ್ನುಂಟು ಮಾಡಿದೆ. ಬೆಂಗಳೂರಲ್ಲಿ ನಡೆದ ಕಾಲ್ತುಳಿತ ಪ್ರಕರಣದ ನಂತರ ಸಿದ್ದರಾಮಯ್ಯ ಸರ್ಕಾರ ಹಲವು ಹಿನ್ನಡೆಗಳನ್ನು ಅನುಭವಿಸಿದೆ. ಕಾಲ್ತುಳಿತ ವಿಧಾನ ಸೌಧದ ಮುಂದೆ ನಡೆದಿದೆಯಾ ಎಂದು ಮುಖ್ಯಮಂತ್ರಿ ಹೇಳಿದ್ದು ಎಐಸಿಸಿಯನ್ನೂ ಮುಜುಗುರಕ್ಕೀಡು ಮಾಡಿದೆ.
ದೆಹಲಿ, ಜೂನ್ 25: ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೆಹಲಿ ಪ್ರವಾಸ ಮುಂದುವರಿದಿದೆ, ನಿನ್ನೆ ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಭೇಟಿಯಾಗಿದ್ದ ಸಿದ್ದರಾಮಯ್ಯ ಇಂದು ಬೆಳಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾದರು. ಸಿದ್ದರಾಮಯ್ಯನವರು ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮತ್ತು ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರೊಂದಿಗೆ ವೇಣುಗೋಪಾಲ್ರನ್ನು ಭೇಟಿಯಾಗಿ ಎಐಸಿಸಿ ಕಚೇರಿಯಿಂದ ಹೊರಬರುತ್ತಿರುವುದನ್ನು ನೋಡಬಹುದು.
ಇದನ್ನೂ ಓದಿ: ಕರ್ನಾಟಕಕ್ಕೆ 16ನೇ ಹಣಕಾಸು ಆಯೋಗದಿಂದ ಸುಮಾರು ₹80,000 ಕೋಟಿ ಅನುದಾನ ಸಿಗಬೇಕಿದೆ: ಸಿದ್ದರಾಮಯ್ಯ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos