ಹೈಕಮಾಂಡ್ ನಿರ್ಧಾರವನ್ನು ನಾನು, ಡಿಸಿಎಂ ಸೇರಿ ಎಲ್ಲರೂ ಒಪ್ಪಬೇಕು: ಸಿಎಂ ಸಿದ್ದರಾಮಯ್ಯ

Edited By:

Updated on: Nov 22, 2025 | 10:31 PM

ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಕ್ಷ ಸಂಘಟನೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಹೈಕಮಾಂಡ್‌ನ ಅಂತಿಮ ನಿರ್ಧಾರಕ್ಕೆ ತಾನು, ಡಿಸಿಎಂ ಹಾಗೂ ಎಲ್ಲರೂ ಬದ್ಧರಾಗಿರುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ದೆಹಲಿಗೆ ತೆರಳಲು ಸಿದ್ಧವಾಗಿದ್ದು, ಹೈಕಮಾಂಡ್ ಸೂಚನೆಗಳನ್ನು ಪಾಲಿಸುವುದಾಗಿ ತಿಳಿಸಿದರು.

ಬೆಂಗಳೂರು, ನವೆಂಬರ್​ 22: ರಾಜ್ಯ ಕಾಂಗ್ರೆಸ್‌ನಲ್ಲಿ ಹೆಚ್ಚಾಗಿರುವ ಬಣ ಬಡಿದಾಟ ಹೈಕಮಾಂಡ್‌ಗೆ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬಂದಿದ್ದು, ನಾಯಕರು ಖರ್ಗೆ ಭೇಟಿಯಾಗಿ ತಮ್ಮದೇ ದಾಳ ಉರುಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡಾ ಮಲ್ಲಿಕಾರ್ಜುನ ಖರ್ಗೆಯವನ್ನ ಭೇಟಿ ಮಾಡಿ ಮಾತುಕತೆ ಮಾಡಿದ್ದಾರೆ. ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಸಿಎಂ, ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚಿಸಿದ್ದೇವೆ. ಅಂತಿಮವಾಗಿ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರಕ್ಕೆ ನಾನು, ಡಿಸಿಎಂ ಸೇರಿ ಎಲ್ಲರೂ ಒಪ್ಪಬೇಕು ಎಂದಿದ್ದಾರೆ.

ಯಾವಾಗ ನನ್ನನ್ನು ಕರೆಯುತ್ತಾರೋ ಆಗ ನಾನು ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಅದರಂತೆ ನಡೆದುಕೊಳ್ಳುವೆ. ಎಐಸಿಸಿ ಅಧ್ಯಕ್ಷ ಖರ್ಗೆ, ನಾನು ಒಂದೂವರೆ ಗಂಟೆ ಚರ್ಚೆ ಮಾಡಿದ್ದೇವೆ. ಇದೊಂದು ಸೌಹಾರ್ದ ಭೇಟಿ. ನಾನು ಡಲ್ ಆಗಲ್ಲ, ನಾನು ಯಾವಾಗಲೂ ಡಲ್ ಆಗುವ ಪ್ರಶ್ನೆಯೇ ಇಲ್ಲ. ನಾನು ಅತಿಯಾಗಿ ಖುಷಿಯಾಗಿಯೂ ಇರಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More