ಸಂಸತ್ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಯವರಿಗೆ ಕರ್ನಾಟಕದ ಸಾಂಪ್ರದಾಯಿಕ ಪೇಟ ತೊಡಿಸಿ, ಗಂಧದ ಹಾರವನ್ನು ಹಾಕುವುದರ ಜೊತೆಗೆ ಶಾಲು ಹೊದಿಸಿ ಸತ್ಕರಿಸಿದರು.
ದೆಹಲಿ: ನಿರೀಕ್ಷೆಯಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ರಾಷ್ಟ್ರದ ರಾಜಧಾನಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಬೇಟಿಯಾದರು. ಗಣ್ಯರ ಭೇಟಿಗೆ ಸಾಕ್ಷಿಯಾಗಿದ್ದು ದೆಹಲಿಯ ಸಂಸತ್ ಭವನ (Parliament House). ಕರ್ನಾಟಕ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಯವರಿಗೆ ಕರ್ನಾಟಕದ ಸಾಂಪ್ರದಾಯಿಕ ಪೇಟ ತೊಡಿಸಿ, ಗಂಧದ ಹಾರವನ್ನು ಹಾಕುವುದರ ಜೊತೆಗೆ ಶಾಲು ಹೊದಿಸಿ ಸತ್ಕರಿಸಿದರು. ರಾಜ್ಯದ ಪರವಾಗಿ ಒಂದು ನೆನಪಿನ ಕಾಣಿಕೆಯನ್ನೂ ಪ್ರಧಾನಿಯವರಿಗೆ ನೀಡಿದರು. ರಾಜ್ಯವೊಂದರ ಮುಖ್ಯಮಂತ್ರಿಯು ಅಧಿಕಾರ ವಹಿಸಿಕೊಂಡು ಸರ್ಕಾರ ರಚಿಸಿದ ಬಳಿಕ ರಾಷ್ಟ್ರದ ಪ್ರಧಾನ ಮಂತ್ರಿಯನ್ನು ಭೇಟಿಯಾಗುವ ಶಿಷ್ಟಾಚಾರ ಭಾರತಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ