Karnataka Budget 2023: ‘ಯಾವ ಕಾಲದ ಶಾಸ್ತ್ರವೇನು ಹೇಳಿದರೇನು’ ಕುವೆಂಪು ಬರೆದ ಕವನದ ಸಾಲುಗಳನ್ನು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ

| Updated By: ಆಯೇಷಾ ಬಾನು

Updated on: Jul 07, 2023 | 1:53 PM

ಬಜೆಟ್ ಮಂಡನೆ ಆರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಕೋಗಿಲೆ ಮತ್ತು ಸೋವಿಯತ್‌ ರಷ್ಯಾ ಎಂಬ ಕವನ ಸಂಕಲನದ ಸಾಲುಗಳನ್ನು ಉಲ್ಲೇಘಿಸಿ ಸಿಎಂ ಸಿದ್ದರಾಮಯ್ಯ ಗಮನ ಸೆಳೆದಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು(Siddaramaiah) ತಮ್ಮ 14ನೇ ಬಜೆಟ್ ಅನ್ನು ಇಂದು (ಜುಲೈ 07) ವಿಧಾನಸಭೆಯಲ್ಲಿ ಮಂಡಿಸಿದ್ದಾರೆ(Karnataka Budget 2023). ಬಜೆಟ್ ಮಂಡನೆ ಆರಂಭದಲ್ಲಿ ಸಿಎಂ ಸಿದ್ದರಾಮಯ್ಯನವರು ರಾಷ್ಟ್ರಕವಿ ಕುವೆಂಪು ಅವರ ‘ಯಾವ ಕಾಲದ ಶಾಸ್ತ್ರವೇನು ಹೇಳಿದರೇನು’ ಎಂಬ ಸಾಲುಗಳನ್ನು ಉಲ್ಲೇಖಿಸಿದ್ರು.

ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು?
ನಿನ್ನೆದೆಯ ದನಿಯೆ ಋಷಿ ! ಮನು ನಿನಗೆ ನೀನು !
ನೀರಡಿಸಿ ಬಂದ ಸೋದರಗೆ ನೀರನು ಕೊಡಲು
ಮನುಧರ್ಮಶಾಸ್ತ್ರವೆನಗೊರೆಯಬೇಕೇನು ?
ನೊಂದವನ ಕಂಬನಿಯನೊರಸಿ ಸಂತೈಸುವೊಡೆ
ಶಾಸ್ತ್ರ ಪ್ರಮಾಣವದಕಿರಲೆ ಬೇಕೇನು ?
ಪಂಚಮರ ಶಿಶುವೊಂದು ಕೆರೆಯಲ್ಲಿ ಮುಳುಗುತಿರೆ
ದಡದಲ್ಲಿ ಮೀಯುತ್ತಾ ನಿಂತಿರುವ ನಾನು
ಮುಟ್ಟಿದರೆ ಬ್ರಹ್ಮತ್ವ ಕೆಟ್ಟು ಹೋಗುವುದೆಂದು
ಸುಮ್ಮನಿದ್ದರೆ ಶಾಸ್ತ್ರ ಸಮ್ಮತವದೇನು?
ಅಂತು ಮನು ತಾನು ಹೇಳಿರಲಾರನಯ್ಯಯ್ಯೋ !
ಹೇಳಿದ್ದರವನೂ ಶಾಸ್ತ್ರದೊಳೆ ಸುತ್ತಿ,
ಸ್ವರ್ಗ ಹೋಗಲಿ, ಮತ್ತೆ ನರಕ ಬಂದರು ಬರಲಿ,
ಎದೆಯ ಧೈರ್ಯವ ಮಾಡಿ ಬಿಸುಡಾಚೆಗೆತ್ತಿ !
ಸ್ವರ್ಗ ಹೋಗುವುದಿಲ್ಲ, ನರಕ ಬರುವುದು ಇಲ್ಲ;
ಸ್ವರ್ಗ ನರಕಗಳೇನು ಶಾಸ್ತ್ರಸ್ಥವಲ್ಲ.
ಎದೆಯ ದನಿ ಧರ್ಮನಿಧಿ! ಕರ್ತವ್ಯವದುವೆ ವಿಧಿ !
ನಂಬದನು; ಅದನುಳಿದು ಋಷಿಯು ಬೇರಿಲ್ಲ !
ಹಿಂದಿನಾ ಋಷಿಗಳೂ ಮಾನವರೆ ನಮ್ಮಂತೆ,
ಅವರ ಶಾಸ್ತ್ರವು ಅವರ ಕಾಲಕ್ಕೆ ಮಾತ್ರ;
ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ
ನಮ್ಮ ಹೃದಯವೇ ನಮಗೆ ಶ್ರೀಧರ್ಮಸೂತ್ರ !

ಎಂದು ಕುವೆಂಪು ಅವರ ಕೋಗಿಲೆ ಮತ್ತು ಸೋವಿಯತ್‌ ರಷ್ಯಾ ಎಂಬ ಕವನ ಸಂಕಲನದ ಸಾಲುಗಳನ್ನು ಉಲ್ಲೇಘಿಸಿ ಗಮನ ಸೆಳೆದಿದ್ದಾರೆ.

Follow us on