ಆಕಸ್ಮಿಕವಾಗಿ ಸಚಿನ್ ತೆಂಡುಲ್ಕರ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಆಕಸ್ಮಿಕವಾಗಿ ಸಚಿನ್ ತೆಂಡುಲ್ಕರ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಹರೀಶ್ ಜಿ.ಆರ್​. ನವದೆಹಲಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 04, 2024 | 10:40 PM

ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟಿದ್ದಾರೆ.

ದೆಹಲಿ, ಜನವರಿ 04: ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.