ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಿ ಮಾದಪ್ಪನ ಸನ್ನಿಧಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

Updated on: Apr 25, 2025 | 10:41 AM

ಮುಖ್ಯಮಂತ್ರಿಯಾದವರು ಚಾಮರಾಜನಗರಕ್ಕೆ ಭೇಟಿ ನೀಡಿದರೆ ಸ್ಥಾನ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯವನ್ನು ಹತ್ತಿಕ್ಕಿರುವ ಸಿದ್ದರಾಮಯ್ಯ ನಿನ್ನೆ ಸಂಪುಟದ ಸಭೆಯನ್ನು ನಡೆಸಿ ತಮ್ಮ ಸಚಿವರನ್ನೂ ಇಲ್ಲಿಗೆ ಕರತಂದಿದ್ದಾರೆ. ಹಾಗೆ ನೋಡಿದರೆ ಸಿದ್ದರಾಮಯ್ಯ ಸಿಎಂ ಆದಮೇಲೆ ಹಲವಾರು ಸಲ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಮಾದಪ್ಪನಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಗುಡಿಯ ಬೆಳ್ಳಿರಥಕ್ಕೂ ಕೈ ಮುಗಿದರು.

ಚಾಮರಾಜನಗರ, ಏಪ್ರಿಲ್ 25: ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Betta) ಗುರುವಾರ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಕೆಲ ಸಹೋದ್ಯೋಗಿಗಳ ಜೊತೆ ಮಾದಪ್ಪನ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಗುಡಿಯ ಅರ್ಚಕರು ಸಿದ್ದರಾಮಯ್ಯ ಹೆಸರಲ್ಲಿ ಅರ್ಚನೆ ಮಾಡಿದರು. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಮತ್ತು ಸಿಎಂ ಆಪ್ತ ಹಾಗೂ ಸಮಾಜ ಕಲ್ಯಾಣ ಖಾತೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಜೊತೆಗಿದ್ದರು.

ಇದನ್ನೂ ಓದಿ:  ಕೇಂದ್ರದ ಜತೆ ನಾವಿದ್ದೇವೆ, ಉಗ್ರರನ್ನು ಸಂಪೂರ್ಣ ಮಟ್ಟ ಹಾಕಿ: ಸಿಎಂ ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ