ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ: ಇಲ್ಲಿದೆ ಮಾಹಿತಿ

Edited By:

Updated on: Feb 22, 2026 | 12:45 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕರ ಕೊರತೆಯ ಬಗ್ಗೆ ಮಾತನಾಡಿದ್ದಾರೆ. ಹಾಲಿ ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಹೇಳಿದ ಅವರು, ಹಂತ ಹಂತವಾಗಿ ನೇಮಕಾತಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅನಿವಾರ್ಯವಾಗಿ ಅತಿಥಿ ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 22: ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಕುರಿತು ಪ್ರಮುಖ ಹೇಳಿಕೆಗಳನ್ನು ನೀಡಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ಮೌಲ್ಯವರ್ಧನೆಗೆ ಶಿಕ್ಷಕರು ಅತ್ಯಗತ್ಯ. ಪ್ರಸ್ತುತ, ವಿಶ್ವವಿದ್ಯಾಲಯಗಳಲ್ಲಿ ಸುಮಾರು ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ಈ ಕೊರತೆಯನ್ನು ನಿಭಾಯಿಸಲು ಸರ್ಕಾರ ಬದ್ಧವಾಗಿದೆ. ಕಳೆದ ವರ್ಷ 2000 ಶಿಕ್ಷಕರನ್ನು ಭರ್ತಿ ಮಾಡಲಾಗಿದೆ. ಮುಂದೆಯೂ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಆದಾಗ್ಯೂ, ನೇಮಕಾತಿ ಆಗುವವರೆಗೆ ಕಾಯಲು ಸಾಧ್ಯವಿಲ್ಲದ ಕಾರಣ ಅತಿಥಿ ಉಪನ್ಯಾಸಕರ ಸೇವೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 22, 2026 12:43 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More